ಜಯಮಾಲಾ 
ಸಿನಿಮಾ ಸುದ್ದಿ

ಕಾವೇರಿ ಹೋರಾಟಕ್ಕೆ ಕನ್ನಡ ಚಿತ್ರರಂಗ ಬೆಂಬಲ: ಕರ್ನಾಟಕದ ಹಿತ ಕಾಪಾಡುವಂತೆ ಸರ್ಕಾರಕ್ಕೆ ಆಗ್ರಹ

ಕಾವೇರಿ ವಿಚಾರದಲ್ಲಿ ಕನ್ನಡ ಚಿತ್ರರಂಗ ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲಲಿದೆ. ರಾಜ್ಯದ ನೆಲ, ಜಲ ಹಾಗೂ ಭಾಷೆಯ ಹಕ್ಕುಗಳನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ಹೋರಾಟಗಳಲ್ಲಿ ಕನ್ನಡ ಚಿತ್ರರಂಗ ಸದಾ ಮುಂಚೂಣಿಯಲ್ಲೇ ನಿಂತಿದೆ. ನಮ್ಮ ರೈತರ ಋಣ ನಮ್ಮ ಮೇಲಿದೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದು, ಕರ್ನಾಟಕ ಹಿತ ರಕ್ಷಿಸುವಂತೆಒತ್ತಾಯಿಸಿದೆ.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಫ್‌ಸಿಸಿ ಅಧ್ಯಕ್ಷೆ ಜಯಮಾಲಾ ಅವರು, ರಾಜ್ಯದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ, ಮೊದಲು ಕರ್ನಾಟಕದ ಅಗತ್ಯಗಳನ್ನು ಪೂರೈಸುವತ್ತ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ರೈತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ವೈಜ್ಞಾನಿಕ ಅಧ್ಯಯನ ನಡೆಸದೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಹೇಳಿದರು.

ಕಾವೇರಿ ವಿಚಾರದಲ್ಲಿ ಕನ್ನಡ ಚಿತ್ರರಂಗ ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲಲಿದೆ. ರಾಜ್ಯದ ನೆಲ, ಜಲ ಹಾಗೂ ಭಾಷೆಯ ಹಕ್ಕುಗಳನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ಹೋರಾಟಗಳಲ್ಲಿ ಕನ್ನಡ ಚಿತ್ರರಂಗ ಸದಾ ಮುಂಚೂಣಿಯಲ್ಲೇ ನಿಂತಿದೆ. ನಮ್ಮ ರೈತರ ಋಣ ನಮ್ಮ ಮೇಲಿದೆ. ಅವರ ಪರವಾಗಿ ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು

ಕೆಎಫ್‌ಸಿಸಿ ಮಾಜಿ ಅಧ್ಯಕ್ಷ ಹಾಗೂ ಹೋರಾಟಗಾರ ಸಾ.ರಾ. ಗೋವಿಂದು ಅವರು ಮಾತನಾಡಿ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ನೀಡಿರುವ ನೀರು ಬಿಡುಗಡೆ ಆದೇಶವನ್ನು ಅವೈಜ್ಞಾನಿಕ ಎಂದು ಟೀಕಿಸಿದರು.

ದೆಹಲಿಯಿಂದ ತಜ್ಞರ ಸಮಿತಿಯನ್ನು ರಾಜ್ಯಕ್ಕೆ ಕಳುಹಿಸಿ, ಜಲಾಶಯಗಳಲ್ಲಿನ ನೀರಿನ ಮಟ್ಟ ಹಾಗೂ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದ ನಂತರವೇ ನೀರು ಹಂಚಿಕೆ ಕುರಿತು ಯಾವುದೇ ನಿರ್ದೇಶನ ನೀಡಬೇಕು. ನೆಲದ ವಾಸ್ತವಾಂಶಗಳನ್ನು ಪರಿಗಣಿಸದೆ ಆದೇಶ ಹೊರಡಿಸುವುದು ಸರಿಯಲ್ಲ" ಎಂದು ಆಗ್ರಹಿಸಿದರು.

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, ಕರ್ನಾಟಕ ಚಲನಚಿತ್ರ ಕಲಾವಿದರ ಸಂಘ ಸೇರಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಎಲ್ಲಾ ಅಂಗಸಂಸ್ಥೆಗಳು ಮಂಡಳಿ ಕೈಗೊಳ್ಳುವ ಮುಂದಿನ ನಿರ್ಧಾರವನ್ನು ಬೆಂಬಲಿಸಲಿವೆ ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿ, ರೈತರ ಬದುಕು ಹಾಗೂ ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಕೆಎಫ್‌ಸಿಸಿ ಈ ವೇಳೆ ಮನವಿ ಮಾಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಅಂತ್ಯದತ್ತ ಸಾಗಿದ ಇಸ್ರೇಲ್-ಹಮಾಸ್ ಯುದ್ಧ: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ, ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!

ಸ್ವಂತ ವರ್ಚಸ್ಸಿನಿಂದ ಗೆದ್ದಿದ್ದೇವೆಂದು ಬೀಗುವವರು, ನೆಹರೂ ಕುಟುಂಬದ ಕುಡಿಯ ಎದುರು ಕೈ ಕಟ್ಟಿ ನಿಂತಿದ್ದಾರೆ..!

ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!

ಜಂತರ್ ಮಂತರ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ: ನೋಯ್ಡಾದ ಮಹಿಳೆ ವಿರುದ್ಧ FIR ದಾಖಲು!