ನಟ ಸುದೀಪ್ 
ಸಿನಿಮಾ ಸುದ್ದಿ

9 ಕೋಟಿ ರೂ ವಂಚನೆ ಆರೋಪ: ನ್ಯಾಯಾಲಯದಲ್ಲಿಂದು ನಟ ಸುದೀಪ್ ವಿಚಾರಣೆ; ನಿರ್ಮಾಪಕರ ಪರ ವಕೀಲರಿಂದ ಕ್ರಾಸ್ ಎಕ್ಸಾಮಿನೇಷನ್!

ನಿರ್ಮಾಪಕರಾದ ಕುಮಾರ್ ಹಾಗೂ ಎಂ.ಎನ್. ಸುರೇಶ್ ಅವರು, ಸಿನಿಮಾ ಕಾಲ್‌ಶೀಟ್ ನೀಡುವುದಾಗಿ ಹೇಳಿ ಸುದೀಪ್ 9 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಆರೋಪಿಸಿದ್ದರು.

ಬೆಂಗಳೂರು: ಸಿನಿಮಾ ಕಾಲ್‌ಶೀಟ್‌ ವಿವಾದದಿಂದ ಆರಂಭವಾಗಿ ಮಾನನಷ್ಟ ಮೊಕದ್ದಮೆಯಾಗಿ ರೂಪುಗೊಂಡಿರುವ ಬಹುಚರ್ಚಿತ ಪ್ರಕರಣದಲ್ಲಿ ನಟ ಕಿಚ್ಚ ಸುದೀಪ್ ಇಂದು ಬೆಂಗಳೂರಿನ ಎಸಿಜೆಎಂ ನ್ಯಾಯಾಲಯದಲ್ಲಿ ನಡೆಯಲಿರುವ ಮಹತ್ವದ ವಿಚಾರಣೆಗೆ ಹಾಜರಾಗಲಿದ್ದಾರೆ.

ಪ್ರಕರಣದ ಸಾಕ್ಷ್ಯಾಧಾರಗಳ ಹಂತದಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ನಿರ್ಮಾಪಕರ ಪರ ವಕೀಲರು ಸುದೀಪ್ ಅವರನ್ನು ಪ್ರತಿಪ್ರಶ್ನೆ (ಕ್ರಾಸ್ ಎಕ್ಸಾಮಿನೇಷನ್) ನಡೆಸಲಿದ್ದಾರೆ.

ನಿರ್ಮಾಪಕರಾದ ಕುಮಾರ್ ಹಾಗೂ ಎಂ.ಎನ್. ಸುರೇಶ್ ಅವರು, ಸಿನಿಮಾ ಕಾಲ್‌ಶೀಟ್ ನೀಡುವುದಾಗಿ ಹೇಳಿ ಸುದೀಪ್ 9 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪಗಳು ತಮ್ಮ ವೈಯಕ್ತಿಕ ಹಾಗೂ ವೃತ್ತಿಪರ ಘನತೆಗೆ ಧಕ್ಕೆ ತಂದಿವೆ ಎಂದು ಆರೋಪಿಸಿ ಸುದೀಪ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

2023ರಲ್ಲಿ ದಾಖಲಾಗಿದ್ದ ಈ ಪ್ರಕರಣ ಹಲವು ಹಂತಗಳ ವಿಚಾರಣೆಯ ಬಳಿಕ ಈಗ ಸಾಕ್ಷ್ಯಗಳ ಪರಿಶೀಲನೆಯ ಹಂತ ತಲುಪಿದೆ. ಈಗಾಗಲೇ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಸುದೀಪ್ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಹಲವು ದಾಖಲೆಗಳನ್ನು ಕೂಡ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಇಂದು ನಡೆಯಲಿರುವ ಕ್ರಾಸ್ ಎಕ್ಸಾಮಿನೇಷನ್ ವೇಳೆ ನಿರ್ಮಾಪಕರ ಪರ ವಕೀಲರು ಸುದೀಪ್ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳುವ ಸಾಧ್ಯತೆ ಇದೆ. ಈ ವಿಚಾರಣೆ ಪ್ರಕರಣದ ಮುಂದಿನ ಹಂತದ ಮೇಲೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಸಾಕಷ್ಟು ಕುತೂಹಲ ಮೂಡಿಸಿದೆ.

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಈ ಕಾನೂನು ಹೋರಾಟದ ಫಲಿತಾಂಶ ಏನಾಗಲಿದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದ್ದು, ಇಂದಿನ ವಿಚಾರಣೆ ಪ್ರಕರಣದ ದಿಕ್ಕು ನಿರ್ಧರಿಸುವ ಪ್ರಮುಖ ಘಟ್ಟವೆಂದು ಪರಿಗಣಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ನಮ್ಮ ಪೋಸ್ಟ್‌ಗಳನ್ನು ಅಳಿಸಬಹುದು, ನಮ್ಮನ್ನು ಅಳಿಸಲು ಸಾಧ್ಯವಿಲ್ಲ’: 'Cockroach Janta Party' ಸಂಸ್ಥಾಪಕ ಅಭಿಜೀತ್ ದೀಪ್ಕೆ

ಸಿಎಂ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತೇನೆ: Ramalinga Reddy

Cricket: ಸೂರ್ಯಗೆ ಗೇಟ್ ಪಾಸ್, Shreyas Iyer ನೂತನ ನಾಯಕ, ಕೊನೆಗೂ Vaibhav Sooryavanshi ಪದಾರ್ಪಣೆ, ಕೊಹ್ಲಿ ಬದಲಿಗೆ ಯಾರು?

ಐಪಿಎಲ್ ವಿಡಿಯೋ ವಿವಾದ: 'ಭಾವನೆಗಳ ಉಲ್ಲಂಘನೆ, ಇನ್ನು ಸಾಕು ಮಾಡಿ'; ನಟಿ Nushrratt Bharuccha ಅಳಲು

NEET ವಿವಾದ: 'Cockroach Janta Party' ಪ್ರತಿಭಟನೆಗೆ ಭಾರೀ ಬೆಂಬಲ; ಜಂತರ್ ಮಂತರ್‌ನಲ್ಲಿ ನೂರಾರು ವಿದ್ಯಾರ್ಥಿಗಳ ಧರಣಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

SCROLL FOR NEXT