ಶುಭಾ ಪೂಂಜಾ-ಸುಮಂತ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಡಿವೋರ್ಸ್ ಸುದ್ದಿ: ಸೋಷಿಯಲ್ ಮೀಡಿಯಾದಲ್ಲಿ ಅಪ್ಡೇಟ್ ಕೊಟ್ಟ ನಟಿ ಶುಭಾ ಪೂಂಜಾ

ಶುಭಾ ಪೂಂಜಾ ಅವರು 2022ರಲ್ಲಿ ಉಡುಪಿ ಮೂಲದ ಸುಮಂತ್ ಬಿಲ್ಲವ್ ಅವರನ್ನು ಮದುವೆಯಾಗಿದ್ದರು.

ಕನ್ನಡದ ನಟಿ ಶುಭಾ ಪೂಂಜಾ ಡಿವೋರ್ಸ್ ಕೇಸು ಮಾಧ್ಯಮಗಳಲ್ಲಿ ಇತ್ತೀಚೆಗೆ ಭಾರೀ ಸುದ್ದಿಯಾಗಿತ್ತು. ಈ ಎಲ್ಲಾ ಚರ್ಚೆಗಳ ನಡುವೆ ನಟಿ ಶುಭಾ ಪೂಂಜಾ ಇಂದು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಮಾಧ್ಯಮ ಮಿತ್ರರಲ್ಲಿ ಮತ್ತು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಶುಭಾ ಪೂಂಜಾ ಅವರು 2022ರಲ್ಲಿ ಉಡುಪಿ ಮೂಲದ ಸುಮಂತ್ ಬಿಲ್ಲವ್ ಅವರನ್ನು ಮದುವೆಯಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ದಂಪತಿಗಳು ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡಿದ್ದವು.

ಇದೇ ಸಮಯದಲ್ಲಿ ಅವರು ಪತಿ ಜೊತೆಗಿನ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ವಿಚ್ಛೇದನ ಸುದ್ದಿಯನ್ನು ಅಲ್ಲಗಳೆಯಲೂ ಇಲ್ಲ, ಒಪ್ಪಿಕೊಂಡಿಯೂ ಇಲ್ಲ. ಇದೀಗ ತಮ್ಮ ಖಾಸಗಿತನವನ್ನು ಗೌರವಿಸುವಂತೆ ಮನವಿ ಮಾಡಿಕೊಂಡಿದ್ದಾರೆ,

ಸೂಕ್ತ ಸಮಯ ಸಂದರ್ಭ ಬಂದಾಗ, ತಾವೇ ವೈಯಕ್ತಿಕವಾಗಿ ನಿಮ್ಮೆಲ್ಲರೊಂದಿಗೆ ಯಾವುದೇ ಅಪ್‌ಡೇಟ್ ಇದ್ದರೂ ಹಂಚಿಕೊಳ್ಳುತ್ತೇನೆ. ಅಲ್ಲಿಯವರೆಗೆ ಊಹಾಪೋಹಗಳನ್ನು ಹಬ್ಬಿಸಬೇಡಿ, ನಿಮ್ಮ ನಿರಂತರ ಪ್ರೀತಿ, ಬೆಂಬಲ ಮತ್ತು ದಯೆಗೆ ಮತ್ತೊಮ್ಮೆ ಧನ್ಯವಾದಗಳು ಎಂದು ಮನವಿ ಮಾಡಿಕೊಂಡಿದ್ದಾರೆ ಶುಭಾ ಪೂಂಜಾ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಗ್ಗಿಲ್ಲದ AI ಕಂಟೆಂಟ್, ಡೀಪ್‌ಫೇಕ್‌ಗಳಿಗೆ ಬ್ರೇಕ್: ಸಾಮಾಜಿಕ ಜಾಲತಾಣಗಳಿಗೆ ಕೇಂದ್ರದ ಹೊಸ ನಿಯಮ!

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಕ್ಯಾಲಿಫೋರ್ನಿಯಾದಲ್ಲಿ ಏಕಾಂಗಿ ಪಾದಯಾತ್ರೆ: ಪೆಟ್ರೋಲಿಯಂಗೆ ಪರ್ಯಾಯ ಶೋಧದಲ್ಲಿ ತೊಡಗಿದ್ದ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿ ನಿಗೂಢ ಸಾವು!

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್