ತಾಯಿ ಜಯಮ್ಮ ಜೊತೆಗಿರುವ ಶ್ರೀಮುರುಳಿ ಚಿತ್ರ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ!

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸ್ಯಾಂಡಲ್ ವುಡ್ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ ನಿಧನರಾಗಿದ್ದಾರೆ. ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ ಇಂದು ಬೆಳಗ್ಗೆ ಅಸುನೀಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪತಿ ಚಿನ್ನೇಗೌಡರು ಸ್ಯಾಂಡಲ್‌ವುಡ್‌ನ ಯಶಸ್ವಿ ನಿರ್ಮಾಪಕರಾಗಿ ಗುರುತಿಸಿಕೊಳ್ಳಲು ಹಾಗೂ ಇಬ್ಬರು ಗಂಡುಮಕ್ಕಳು ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಬೆಳೆಯಲು ಜಯಮ್ಮ ಅವರ ಪ್ರೋತ್ಸಾಹ, ಬೆಂಬಲ ಅಪಾರವಾಗಿತ್ತು. ಅವರೂ ಕೂಡಾ ನಿರ್ಮಾಪಕಿಯಾಗಿದ್ದು' ಸೇವಂತಿ ಸೇವಂತಿ' ಸಿನಿಮಾ ನಿರ್ಮಿಸಿದ್ದಾರೆ.

2023ರಲ್ಲಿ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದರಿಂದ ಹೊರಬಂದಿದ್ದ ಕುಟುಂಬಕ್ಕೆ ಇದೀಗ ಜಯಮ್ಮ ಸಾವು ಅಪಾರ ನೋವುಂಟು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!