ನಟಿ ರುಕ್ಮಿಣಿ ವಸಂತ್  
ಸಿನಿಮಾ ಸುದ್ದಿ

AI ಬಳಸಿ ನಟಿ ರುಕ್ಮಿಣಿ ವಸಂತ್ ಬಿಕಿನಿ ಫೋಟೋ, ವಿಡಿಯೋ ವೈರಲ್​ ಕೇಸ್; ಮೂವರು ಆರೋಪಿಗಳ ಬಂಧನ

ಬಂಧಿತ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ನಿವಾಸಿ ರವಿಕುಮಾರ್ (24) ಶಿವಮೊಗ್ಗ ಜಿಲ್ಲೆಯ ನಿವಾಸಿ ಆದರೆ ಬೆಂಗಳೂರಿನಲ್ಲಿ ವಾಸಿಸುವ ಚಂದ್ರಕಾಂತ್ (33) ಮತ್ತು ಬೆಂಗಳೂರಿನ ನಿವಾಸಿ ರಂಜಿತ್ (25) ಎಂದು ಗುರುತಿಸಲಾಗಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರುಕ್ಮಿಣಿ ವಸಂತ್ ಬಿಕಿನಿಯಲ್ಲಿರುವ AI ಫೋಟೋ ಮತ್ತು ವಿಡಿಯೋ ವೈರಲ್ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ.

ಬಂಧಿತ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ನಿವಾಸಿ ರವಿಕುಮಾರ್ (24) ಶಿವಮೊಗ್ಗ ಜಿಲ್ಲೆಯ ನಿವಾಸಿ ಆದರೆ ಬೆಂಗಳೂರಿನಲ್ಲಿ ವಾಸಿಸುವ ಚಂದ್ರಕಾಂತ್ (33) ಮತ್ತು ಬೆಂಗಳೂರಿನ ನಿವಾಸಿ ರಂಜಿತ್ (25) ಎಂದು ಗುರುತಿಸಲಾಗಿದೆ.

ಕಳೆದ ತಿಂಗಳು ನಟಿ ಸಲ್ಲಿಸಿದ ದೂರಿನ ಆಧಾರದ ತನಿಖೆ ಆರಂಭಿಸಲಾಗಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳು AI ತಂತ್ರಜ್ಞಾನವನ್ನು ಬಳಸಿಕೊಂಡು ಅಶ್ಲೀಲ ಪೋಟೋ ಮತ್ತು ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿರುವುದು ತನಿಖೆ ವೇಳೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ರುಕ್ಮಿಣಿ ವಸಂತ್​ ಅವರ ಡೀಪ್​ಫೇಕ್​ ವಿಡಿಯೋವನ್ನು ವೈರಲ್ ಮಾಡಿದ್ದರು. ಆ ವಿಡಿಯೋದಲ್ಲಿ ಅವರು ಬಿಕಿನಿ ಧರಿಸಿ ಸ್ವಿಮ್ಮಿಂಗ್ ಪೂಲ್‌ನಿಂದ ಹೊರಬರುತ್ತಿರುವ ದೃಶ್ಯವನ್ನು ತೋರಿಸಲಾಗಿತ್ತು. ಆದರೆ ಅದು ನಿಜವಾದ ವಿಡಿಯೋ ಅಲ್ಲ ಎಂಬುದು ನಂತರ ಬೆಳಕಿಗೆ ಬಂದಿತ್ತು. ಡೀಪ್‌ಫೇಕ್ ವಿಡಿಯೋ ವೈರಲ್ ಆದ ಬಳಿಕ ನಟಿ ರುಕ್ಮಿಣಿ ವಸಂತ್ ಬೇಸರವನ್ನು ವ್ಯಕ್ತಪಡಿಸಿದ್ದರು. ತಮ್ಮ ವ್ಯಕ್ತಿತ್ವ ಮತ್ತು ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಈ ವಿಡಿಯೋ ಸೃಷ್ಟಿಸಲಾಗಿದೆ ಎಂದು ಆರೋಪಿಸಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಿ, ತನಿಖೆ ಕೈಗೊಳ್ಳಲಾಯಿತು.

ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸೈಬರ್ ಕಮಾಂಡ್‌ನ ಸಿಐಡಿ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಪರಾಧದಲ್ಲಿ ಬಳಸಲಾದ ಮೂರು ಮೊಬೈಲ್ ಫೋನ್‌ಗಳನ್ನು ಅವರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರೆಂಟಿ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

BIDADI TOWNSHIP: 7,481 ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು

IPL 2027: ಮರಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್, ಲಕ್ನೋ ತಂಡಕ್ಕೆ ಕುಲದೀಪ್ ಯಾದವ್ ಸೇರುವ ಸಾಧ್ಯತೆ!

ಸೈಬರ್ ವಂಚನೆ ತಡೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ: ಸಂತ್ರಸ್ತರಿಂದ ದೋಚಿದ್ದ 436 ಕೋಟಿ ರೂ freez!

ಅಭಿಷೇಕ್ ಬ್ಯಾನರ್ಜಿ ಲೋಕಸಭಾ ಸ್ಪೀಕರ್ ಭೇಟಿ; TMC ಬಂಡಾಯ ಸಂಸದರ ಅನರ್ಹತೆ ಕೋರಿ 20 ಅರ್ಜಿ ಸಲ್ಲಿಕೆ!