ನಿವೇದಿತಾ ಗೌಡ, ಕಿಶನ್ 
ಸಿನಿಮಾ ಸುದ್ದಿ

ರೀಲ್ಸ್ ಮಾಡಲು ನವಿಲುಗರಿ ಬಳಕೆ: ಕ್ಷಮೆ ಕೇಳಿದ ನಿವೇದಿತಾ ಗೌಡ, ಕಿಶನ್; ತನಿಖೆಗೂ ಸಹಕಾರ ಎಂದ ನಟಿ

ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ನಟಿ ನಿವೇದಿತಾ ಗೌಡ ಹಾಗೂ ಕಿಶನ್ ಇಬ್ಬರೂ ವಿಡಿಯೋ ಮೂಲಕ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.

ಬೆಂಗಳೂರು: ನವಿಲು ಗರಿಗಳಿರುವ ಉಡುಪು ಧರಿಸಿ ರೀಲ್ಸ್ ಮಾಡಿದ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ಕಿಶನ್ ಹಾಗೂ ನಿವೇದಿತಾ ಗೌಡ ಅವರ ವಿರುದ್ಧ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ.

ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ನಟಿ ನಿವೇದಿತಾ ಗೌಡ ಹಾಗೂ ಕಿಶನ್ ಇಬ್ಬರೂ ವಿಡಿಯೋ ಮೂಲಕ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.

ರೀಲ್ಸ್ ಮಾಡಲು ನವಿಲುಗರಿ ಬಳಕೆ ಮಾಡುವ ಮೂಲಕ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಇಬ್ಬರೂ ರೀಲ್ಸ್ ಡಿಲೀಟ್ ಮಾಡಿ, ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ನಿವೇದಿತಾ ಗೌಡ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹಂಚಿಕೊಂಡಿದ್ದು, ವನ್ಯಜೀವಿ ವಸ್ತುಗಳನ್ನು ಅಥವಾ ಗರಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಮತ್ತು ಅದರಿಂದ ವಿಡಿಯೋ ಮಾಡುವುದು ಕಾನೂನು ಬಾಹಿರ. ಇದು ತಪ್ಪು ತಿಳುವಳಿಕೆಯಿಂದ ಮಾಡಿದ ವಿಡಿಯೋ. ಬೇರೆ ಯಾರೂ ಕೂಡ ಈ ರೀತಿಯ ವನ್ಯಜೀವಿ ವಸ್ತುಗಳನ್ನು ಬಳಸಿ ವಿಡಿಯೋ ಮಾಡಬೇಡಿ ಎಂದು ವಿನಂತಿಸಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಸದ್ಯ ನಡೆಯುತ್ತಿರುವ ಅರಣ್ಯ ಇಲಾಖೆಯ ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಅರಣ್ಯ ಇಲಾಖೆ ನೋಟಿಸ್ ನೀಡಿದ ಬಳಿಕ ಕಿಶನ್ ವಿಡಿಯೋ ಬಿಡುಗಡೆ ಮಾಡಿ ತಪ್ಪೊಪ್ಪಿಕೊಂಡಿದ್ದಾರೆ. ವಿಡಿಯೋ ಮಾಡುವ ವೇಳೆ ಇದು ಕಾನೂನುಬಾಹಿರ ಎಂಬ ಮಾಹಿತಿ ನಮಗೆ ಇರಲಿಲ್ಲ. ಹಲವು ತಂಡಗಳು ಸೇರಿ ಈ ಕೊಲಾಬರೇಷನ್ ವಿಡಿಯೋ ಮಾಡಿದ್ದೆವು. ಬಳಸಿದ ನವಿಲು ಗರಿಗಳನ್ನು ಬಾಡಿಗೆಗೆ ಪಡೆದಿದ್ದೆವು ಎಂದು ಹೇಳಿದ್ದಾರೆ.

ಇನ್ನು, ನಾನು ಒಬ್ಬ ಇನ್‌ಫ್ಲುಯೆನ್ಸರ್ ಆಗಿರುವುದರಿಂದ ಜನರಿಗೆ ತಪ್ಪು ಸಂದೇಶ ಹೋಗಬಾರದು. ಅದಕ್ಕಾಗಿ ವಿಡಿಯೋವನ್ನು ಅಳಿಸಿದ್ದೇನೆ. ಯಾರೂ ಕೂಡ ನವಿಲು ಗರಿಗಳನ್ನು ಬಳಸಬೇಡಿ ಎಂದು ಮನವಿ ಮಾಡಿದ್ದಾರೆ.

ಸದಾ ರೀಲ್ಸ್‌ನಲ್ಲಿ ಮಿಂಚುವ ನಿವೇದಿತಾ ಗೌಡ ಅವರು ಡ್ಯಾನ್ಸರ್ ಕಿಶನ್ ಅವರ ಜೊತೆ ನೈಜ ನವಿಲು ಗರಿಗಳನ್ನು ಬಳಸಿ ತಯಾರಿಸಿದ ಉಡುಪು ಧರಿಸಿ, ಹೇ ನವಿಲೇ ನವಿಲೇ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅಲ್ಲದೆ ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ