ನಟಿ ಸಪ್ತಮಿ ಗೌಡ 
ಸಿನಿಮಾ ಸುದ್ದಿ

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ವಿಡಿಯೋ ಚಿತ್ರೀಕರಣ: ಪಾಪರಾಜಿ, ಯೂಟ್ಯೂಬರ್‌ಗಳ ವಿರುದ್ಧ ನಟಿ ಸಪ್ತಮಿ ಗೌಡ ಕಿಡಿ

ಈ ಕುರಿತು ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಬರೆದಿರುವ ಅವರು, ಚಿತ್ರರಂಗದಲ್ಲಿ ಮಹಿಳೆಯರಿಗೆ ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ ಎಂದಿದ್ದಾರೆ.

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಟಿಯರ ಫೋಟೊ ಮತ್ತು ವಿಡಿಯೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಪರಿಪಾಠ ಚಾಲ್ತಿಯಲ್ಲಿದೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಟಿಯರ ಫೋಟೊ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುವುದು ಮತ್ತು ಅವುಗಳಿಗೆ ಅಸಭ್ಯವಾಗಿ ಕಮೆಂಟ್ ಮಾಡುವುದರ ವಿರುದ್ಧ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಕಿಡಿಕಾರಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಬರೆದಿರುವ ಅವರು, ಚಿತ್ರರಂಗದಲ್ಲಿ ಮಹಿಳೆಯರಿಗೆ ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ ಎಂದಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೊಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ಅವರ ಕಲೆಗಿಂತಲೂ ಅವರ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪದೇ ಪದೆ ನಡೆಯುತ್ತಿವೆ ಎಂದು ದೂರಿದರು.

ಕೆಲವರಿಂದ ಇಂತಹ ವರ್ತನೆಗಳು ನಡೆಯುತ್ತಿದ್ದರೂ, ಇದು ಅಸಭ್ಯ, ಅವಮಾನಕಾರಿ ಮತ್ತು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ನಾವು ಇಲ್ಲಿ ಕಲೆಯನ್ನು ನಂಬಿ, ಸಿನಿಮಾ ಮಾಡಲು ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡಿ, ಅಸಭ್ಯ ಕೋನಗಳಿಂದ ನಟಿಯರನ್ನು ಚಿತ್ರೀಕರಿಸುವುದು ನಮ್ಮ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಸಹಿಸಲು ಆಗುವುದಿಲ್ಲ ಎಂದಿದ್ದಾರೆ.

ಯಾವುದೇ ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಿಕೊಳ್ಳಬೇಕೆಂದು ನಾವು ನಿರೀಕ್ಷಿಸುತ್ತೇವೆ. ಈ ಗಡಿ ರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೆ ನಾವು ಒಟ್ಟಾಗಿ ನಿಂತಿದ್ದೇವೆ. ಗೌರವ ನೀಡುವಂತೆ ಒತ್ತಾಯಿಸುವ ನಮ್ಮ ಧ್ವನಿ ಮುಂದುವರಿಯುತ್ತದೆ ಎಂದು ಸಪ್ತಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು: ಮಧ್ಯಪ್ರಾಚ್ಯ ಯುದ್ಧ ವಿಸ್ತರಣೆ ಸುಳಿವು ನೀಡಿದ ಇರಾನ್; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!

Yamuna Expressway ದುರಂತ: ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ: ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!

ಕಾವೇರಿ ಜಲ ವಿವಾದ: ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಶಾಕ್; CWMA ಆದೇಶ ಪಾಲಿಸುವಂತೆ ಸೂಚನೆ, ಅ.12ಕ್ಕೆ ವಿಚಾರಣೆ ಮುಂದೂಡಿಕೆ..!

ಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ