ನಟಿ ರುಕ್ಮಿಣಿ ವಸಂತ್ 
ಸಿನಿಮಾ ಸುದ್ದಿ

'ದೇಹದ ಮೇಲೆ ಕ್ಯಾಮೆರಾ Zoom': ಪಾಪರಾಜಿಗಳ ವಿರುದ್ಧ ಸಪ್ತಮಿಗೌಡ ಕಿಡಿ; Rukmini Vasanth ಬೆಂಬಲ!

ಇತ್ತೀಚಿನ ದಿನಗಳಲ್ಲಿ ನಟಿಯರ ಫೋಟೊ ಮತ್ತು ವಿಡಿಯೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಪರಿಪಾಠ ಚಾಲ್ತಿಯಲ್ಲಿದೆ.

ಬೆಂಗಳೂರು: ನಟಿಯರ ದೇಹದ ಅಂಗಗಳ ಮೇಲೆ ಕ್ಯಾಮೆರಾ Zoom ಮಾಡಿ ಚಿತ್ರೀಕರಿಸುವ ಪಾಪರಾಜಿಗಳು ಮತ್ತು ಕೆಲ ಯೂಟ್ಯೂಬರ್ ಗಳ ವಿರುದ್ಧ ಕಿಡಿಕಾರಿರುವ ನಟಿ ಸಪ್ತಮಿ ಗೌಡಗೆ ನಟಿ ರುಕ್ಮಿಣಿ ವಸಂತ್ ಬೆಂಬಲ ಸೂಚಿಸಿ ಕಿಡಿಕಾರಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಟಿಯರ ಫೋಟೊ ಮತ್ತು ವಿಡಿಯೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಪರಿಪಾಠ ಚಾಲ್ತಿಯಲ್ಲಿದೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಟಿಯರ ಫೋಟೊ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುವುದು ಮತ್ತು ಅವುಗಳಿಗೆ ಅಸಭ್ಯವಾಗಿ ಕಮೆಂಟ್ ಮಾಡುವುದರ ವಿರುದ್ಧ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಕಿಡಿಕಾರಿದ್ದರು.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೊಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ಅವರ ಕಲೆಗಿಂತಲೂ ಅವರ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪದೇ ಪದೆ ನಡೆಯುತ್ತಿವೆ ಎಂದು ಕಿಡಿಕಾರಿದ್ದರು.

ಇದೀಗ ಸಪ್ತಮಿಗೌಡ ಆರೋಪಕ್ಕೆ ಧನಿಗೂಡಿಸಿರುವ ನಟಿ ರುಕ್ಮಿಣಿ ವಸಂತ್ ಕೂಡ ಪಾಪರಾಜಿಗಳ ಕೃತ್ಯವನ್ನು ಅಗೌರವದ ವರ್ತನೆ ಎಂದು ಕಿಡಿಕಾರಿದ್ದಾರೆ. ಮಾತ್ರವಲ್ಲದೇ ಸಪ್ತಮಿಗೌಡ ಹಂಚಿಕೊಂಡಿದ್ದ ಪೋಸ್ಟ್ ಅನ್ನು ಶೇರ್ ಮಾಡಿಕೊಳ್ಳುವ ಮೂಲಕ ಸಪ್ತಮಿ ಗೌಡ ನಡೆಯನ್ನು ಬೆಂಬಲಿಸಿದ್ದಾರೆ.

ರುಕ್ಮಿಣಿ ವಸಂತ್ ಮಾತ್ರವಲ್ಲದೇ ಮಹಿಳಾ ಕಲಾವಿದೆಯರ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ನಟ-ನಟಿಯರು ಸಪ್ತಮಿ ಅವರ ಮಾತಿಗೆ ದನಿಗೂಡಿಸಿದ್ದಾರೆ. ಪ್ರಮುಖವಾಗಿ ನಟಿಯರಾದ ‘ಕ್ರೇಜಿ ಕ್ವೀನ್’ ರಕ್ಷಿತಾ ಪ್ರೇಮ್, ಆಶಿಕಾ ರಂಗನಾಥ್, ಮಾಳವಿಕಾ ಅವಿನಾಶ್, ಐಶಾನಿ ಶೆಟ್ಟಿ ಹಾಗೂ ನಟರಾದ 'ದುನಿಯಾ' ವಿಜಯ್, ಯುವರಾಜ್‌ಕುಮಾರ್ ಸೇರಿದಂತೆ ಅನೇಕರು ಈ ವಿಚಾರವಾಗಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಸಪ್ತಮಿಗೌಡ ಹೇಳಿದ್ದೇನು?

ಚಿತ್ರರಂಗದಲ್ಲಿ ಮಹಿಳೆಯರಿಗೆ ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೊಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ಅವರ ಕಲೆಗಿಂತಲೂ ಅವರ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪದೇ ಪದೆ ನಡೆಯುತ್ತಿವೆ ಎಂದು ಸಪ್ತಮಿಗೌಡ ಕಿಡಿಕಾರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!