‘ಸರ್ಸೆ ನಿನ್ನ ಸೆರಗಾ ಸರ್ಸೆ ಹಾಡಿನಲ್ಲಿ ಸಂಜಯ್ ದತ್ ಮತ್ತು ನೋರಾ ಫತೇಹಿ  
ಸಿನಿಮಾ ಸುದ್ದಿ

'KD' ಸಿನಿಮಾದ ಅಶ್ಲೀಲ ಹಾಡು ಲೋಕಸಭೆಯಲ್ಲಿ ಪ್ರತಿಧ್ವನಿ; 'ಸರ್ಸೆ ನಿನ್ನ ಸೆರಗ ಸರ್ಸೆ' ಬ್ಯಾನ್!

ಇಂದು ಲೋಕಸಭೆಯಲ್ಲಿ ಅಶ್ಲೀಲ ಹಾಡಿನ ಕುರಿತು ಸಮಾಜವಾದಿ ಪಕ್ಷದ ಸಂಸದ ಆನಂದ್ ಬಡೋರಿಯಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಅಶ್ವಿನಿ ವೈಷ್ಣವ್ ಅವರು, ‘ಈ ಹಾಡನ್ನು ಈಗಾಗಲೇ ನಿಷೇಧಿಸಲಾಗಿದೆ ಎಂದರು.

ನವದೆಹಲಿ: ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಡಿ ದಿ ಡೆವಿಲ್ ಸಿನಿಮಾದ ವಿವಾದಾತ್ಮಕ ಹಾಡು ‘ಸರ್ಕೆ ಚುನರ್ ತೇರಿ’ ಅಥವಾ ‘ಸರ್ಸೆ ನಿನ್ನ ಸೆರಗ ಸರ್ಸೆ’ ಬುಧವಾರ ಲೋಕಸಭೆಯಲ್ಲೂ ಪ್ರತಿಧ್ವನಿಸಿದ್ದು, ಕೇಂದ್ರ ಸರ್ಕಾರ ಈ ಅಶ್ಲೀಲ ಹಾಡನ್ನು ಬ್ಯಾನ್ ಮಾಡಿದೆ.

ಇಂದು ಲೋಕಸಭೆಯಲ್ಲಿ ಅಶ್ಲೀಲ ಹಾಡಿನ ಕುರಿತು ಸಮಾಜವಾದಿ ಪಕ್ಷದ ಸಂಸದ ಆನಂದ್ ಬಡೋರಿಯಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಅಶ್ವಿನಿ ವೈಷ್ಣವ್ ಅವರು, ‘ಈ ಹಾಡನ್ನು ಈಗಾಗಲೇ ನಿಷೇಧಿಸಲಾಗಿದೆ ಎಂದರು.

ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವು ಸಂಪೂರ್ಣ ಪ್ರಶ್ನಾತೀತವಲ್ಲ. ಸಂವಿಧಾನದ ರಚನೆಕಾರರು ವಿಧಿಸಿರುವ ಸಮಂಜಸವಾದ ನಿರ್ಬಂಧಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸಚಿವರು ಒತ್ತಿ ಹೇಳಿದರು.

ಇದೇ ವೇಳೆ ಸಂವಿಧಾನದ ವಿಧಿ 19(2) ಉಲ್ಲೇಖಿಸಿದ ಸಚಿವರು, ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಮತ್ತು ನೈತಿಕತೆಗೆ ಧಕ್ಕೆ ಬಂದಾಗ ಇಂತಹ ನಿರ್ಬಂಧಗಳನ್ನು ಹೇರಲು ಸರ್ಕಾರಕ್ಕೆ ಅಧಿಕಾರವಿದೆ ಎಂದರು.

ಸಮಾಜದ ರಕ್ಷಣೆಗಾಗಿ, ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ವಂಚಿತ ವರ್ಗಗಳ ಗೌರವ ಕಾಪಾಡಲು ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಅಶ್ವಿನಿ ವೈಷ್ಣವ್ ಅವರು ಲೋಕಸಭೆಗೆ ತಿಳಿಸಿದರು.

ಬಾಲಿವುಡ್ ನಟಿ ನೋರಾ ಫತೇಹಿ ಮತ್ತು ಬಾಲಿವುಡ್ ನಟ ಸಂಜಯ್ ದತ್ ಡ್ಯಾನ್ಸ್ ಮಾಡಿರುವ ‘ಕೆಡಿ’ (KD) ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಈ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಉತ್ತರ ಭಾರತದಲ್ಲಿ ಈ ಚಿತ್ರದ ಹಿಂದಿ ಅವತರಣಿಕೆಯಾದ ‘ಸರ್ಕೆ ಚುನರ್ ತೇರಿ’ ಹಾಡಿಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಹಿಂದಿ ಆವೃತ್ತಿಯ ಹಾಡನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

'ಅಶ್ಲೀಲ ಅಲ್ಲ..' 'ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಕೇಸ್: ಬಿಜೆಪಿ ಮುಖಂಡ ಸೇರಿ 39 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಉಪ ಚುನಾವಣೆ 2026: ಸಿದ್ದರಾಮಯ್ಯ ಸಂಧಾನ ಯಶಸ್ವಿ, ಬಾಗಲಕೋಟೆ ಕಾಂಗ್ರೆಸ್ ಕದನಕ್ಕೆ ಕೊನೆಗೂ ತೆರೆ!

SCROLL FOR NEXT