ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

ಫಿಲಡೆಲ್ಫಿಯಾದಲ್ಲಿ 'ಅಕ್ಕ' ರಜತ ಮಹೋತ್ಸವ: ಸಾಂಸ್ಕೃತಿಕ ರಾಯಭಾರಿಯಾಗಿ ರಿಷಬ್ ಶೆಟ್ಟಿ ನೇಮಕ!

ರಜತ ಮಹೋತ್ಸವ ಸಂಭ್ರಮವು ವಿಶ್ವದ ಕನ್ನಡಿಗರ ಏಕತೆಯ ಪ್ರತೀಕವಾಗಿದ್ದು, ಅಮೆರಿಕದ ವಿವಿಧ ರಾಜ್ಯಗಳಿಂದ ಹಾಗೂ ಕರ್ನಾಟಕ ಸೇರಿದಂತೆ ವಿವಿಧೆಡೆಯಿಂದ ಕನ್ನಡಾಭಿಮಾನಿಗಳು ಭಾಗವಹಿಸಲಿದ್ದಾರೆ.

ಬೆಂಗಳೂರು: ಅಮೆರಿಕ ಕನ್ನಡ ಕೂಟಗಳ ಆಗರವು (ಅಕ್ಕ) ಸೆಪ್ಟೆಂಬರ್‌ 4ರಿಂದ 6ರವರೆಗೆ ಅಮೆರಿಕದ ಫಿಲಡೆಲ್ಫಿಯಾದಲ್ಲಿ ಹಮ್ಮಿಕೊಂಡಿರುವ ರಜತ ಮಹೋತ್ಸವ ಸಮಾರಂಭಕ್ಕೆ ನಟ ರಿಷಬ್ ಶೆಟ್ಟಿ ಅವರನ್ನು ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಿಸಿದೆ.

ರಜತ ಮಹೋತ್ಸವ ಸಂಭ್ರಮವು ವಿಶ್ವದ ಕನ್ನಡಿಗರ ಏಕತೆಯ ಪ್ರತೀಕವಾಗಿದ್ದು, ಅಮೆರಿಕದ ವಿವಿಧ ರಾಜ್ಯಗಳಿಂದ ಹಾಗೂ ಕರ್ನಾಟಕ ಸೇರಿದಂತೆ ವಿವಿಧೆಡೆಯಿಂದ ಕನ್ನಡಾಭಿಮಾನಿಗಳು ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾರ್ಯಕ್ರಮದಲ್ಲಿ ಕನ್ನಡ ನಾಡು–ನುಡಿಗೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು, ವಾಣಿಜ್ಯ ಹಾಗೂ ಉದ್ಯಮಿಗಳ ಸಮ್ಮೇಳನ, ಕನ್ನಡ ಚಲನಚಿತ್ರ ಹಾಗೂ ನಾಟಕಗಳ ಪ್ರದರ್ಶನ ಸೇರಿ ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಉತ್ತರ ಅಮೆರಿಕಾದ ಕನ್ನಡ ಸಮುದಾಯಕ್ಕೆ ಇದು ಅಪಾರ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ‘ರಿಷಬ್ ಶೆಟ್ಟಿ ಅವರ ಉಪಸ್ಥಿತಿ ಈ ಸಮ್ಮೇಳನಕ್ಕೆ ಇನ್ನಷ್ಟು ಭವ್ಯತೆ, ಗೌರವ ಮತ್ತು ಅಂತರರಾಷ್ಟ್ರೀಯ ಮೆರುಗು ನೀಡಲಿದೆ’ ಎಂದಿದ್ದಾರೆ.

"ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಅವರ ಆಳವಾದ ಪ್ರೀತಿಯಿಂದ, ಅವರ ವಿಶಿಷ್ಟ ಕಲಾತ್ಮಕ ದೃಷ್ಟಿಕೋನದ ಮೂಲಕ, ರಿಷಬ್ ಶೆಟ್ಟಿ ಅವರು ಕನ್ನಡ ಹೆಮ್ಮೆಯನ್ನು ಜಾಗತಿಕವಾಗಿ ಹೆಚ್ಚಿಸಿದ್ದಾರೆ. ಅವರು ಕನ್ನಡಿಗರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೌಂಟರ್; ನಾಮಪತ್ರ ಸಲ್ಲಿಸಿದ BJP ಅಭ್ಯರ್ಥಿ; ಸ್ಪೀಕರ್ ಚುನಾವಣೆ ಬಹಿಷ್ಕಾರ

RSS ಪಥಸಂಚಲನ, ಸಾರ್ವಜನಿಕ ಸ್ಥಳ ಬಳಕೆ ತಡೆಯಲು ಹೊಸ ಕಾನೂನು ತರಲು ಮುಂದಾದ ಡಿಕೆ ಸರ್ಕಾರ!

ಮನೆ ಮುಂದೆ ಕಾರು ನಿಲ್ಲಿಸೋದಕ್ಕೂ ದಂಡ; ಲೂಟಿ ಸರ್ಕಾರದ ಹೊಸ ಸ್ಕೆಚ್: ಆರ್ ಅಶೋಕ್ ವಾಗ್ದಾಳಿ

ಅಕಾಲಿ ದಳ ಮುಖ್ಯಸ್ಥ ಸುಖ ಬೀರ್ ಸಿಂಗ್ ಮೇಲೆ 'ಕಿರ್ಪಾನ್' ನಿಂದ ದಾಳಿ: ಗುರುದ್ವಾರದ ಸೇವಕನಿಂದಲೇ ಕೃತ್ಯ! ಆರೋಪಿ ವಶಕ್ಕೆ

ಕರ್ನಾಟಕ ಪುರುಷರ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಿ ವಿನಯ್ ಕುಮಾರ್ ನೇಮಕ