ರಿಷಬ್, ರುಕ್ಷ್ಮಿಣಿ ಮತ್ತು ರಾಜ್ ಬಿ ಶೆಟ್ಟಿ 
ಸಿನಿಮಾ ಸುದ್ದಿ

'ಕಾಂತಾರ' ಜಾಗತಿಕ ಯಶಸ್ಸಿನ ಬಳಿಕ ಆಪ್ತ ಬಳಗದಿಂದ ದೂರ? ರಾಜ್-ರುಕ್ಮಿಣಿ Unfollow ಮಾಡಿದ ರಿಷಬ್; 'ಹೊಂಬಾಳೆ' ಜೊತೆ ಮನಸ್ತಾಪ?

ತಮ್ಮ ಅತ್ಯಾಪ್ತ ಗೆಳೆಯ, ರಾಜ್ ಬಿ. ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಅವರನ್ನೂ ಅನ್‌ಫಾಲೋ ಮಾಡಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಿಷಬ್ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ರಿಷಬ್ ಮೊದಲು ಹೊಂಬಾಳೆ ಮತ್ತು ಕಾಂತಾರ ಅಧಿಕೃತ ಖಾತೆಗಳನ್ನು ಅನ್‌ಫಾಲೋ ಮಾಡಿದ್ದರು.

ಈಗ ಅಚ್ಚರಿ ಎಂಬಂತೆ, ತಮ್ಮ ಅತ್ಯಾಪ್ತ ಗೆಳೆಯ, ರಾಜ್ ಬಿ. ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಅವರನ್ನೂ ಅನ್‌ಫಾಲೋ ಮಾಡಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ರಿಷಬ್ ಮತ್ತು ರಾಜ್ ಬಿ. ಶೆಟ್ಟಿ ನಡುವೆ ವೈಮನಸ್ಸು ಉಂಟಾಗಿದೆ ಎಂಬ ವದಂತಿಗಳು ಈ ಹಿಂದೆಯೇ ಹರಿದಾಡುತ್ತಿದ್ದವು. ಈ ಬಗ್ಗೆ ಇತ್ತೀಚೆಗೆ ಸ್ಪಷ್ಟನೆ ನೀಡಿದ್ದ ರಾಜ್ ಬಿ. ಶೆಟ್ಟಿ, ನಮ್ಮ ನಡುವೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದರು.

ಆದರೆ ರಿಷಬ್ ಅವರ ಈ ಸಡನ್ ಅನ್‌ಫಾಲೋ ನಡೆ ಅಭಿಮಾನಿಗಳಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜ್ ಮತ್ತು ರುಕ್ಮಿಣಿ ಇಬ್ಬರೂ ಇಂದಿಗೂ ರಿಷಬ್ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ.

ಯುಗಾದಿ ಹಬ್ಬದಂದು ರಿಷಬ್ ‘2ನೇ ಅಧ್ಯಾಯ ಆರಂಭ’ ಎಂಬ ಪೋಸ್ಟರ್ ಹಂಚಿಕೊಂಡಿದ್ದರು. ಇದು ‘ಕಾಂತಾರ’ ಸರಣಿಯದ್ದೇ ಅಥವಾ ಅವರ ಮೊದಲ ಹಿಟ್ ಚಿತ್ರ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ಯ ಮುಂದುವರಿದ ಭಾಗವೇ ಎಂಬ ಗೊಂದಲ ಅಭಿಮಾನಿಗಳಲ್ಲಿದೆ. ಹೊಂಬಾಳೆ ಬ್ಯಾನರ್ ಬದಲಿಗೆ ರಿಷಬ್ ತಮ್ಮದೇ ಸ್ವಂತ ಬ್ಯಾನರ್ ಅಡಿಯಲ್ಲಿ ಹೊಸ ಸಿನಿಮಾ ಘೋಷಿಸಿರುವುದು ಭಿನ್ನಾಭಿಪ್ರಾಯದ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳು

ಅಯೋಧ್ಯೆ ರಾಮಮಂದಿರ ಬಳಿಕ ಬದರಿನಾಥ ದೇವಾಲಯದಲ್ಲೂ ದೇಣಿಗೆ ಕಳ್ಳತನ ಆರೋಪ, ತನಿಖೆಗೆ ಆದೇಶ!

New Aadhaar App ಮೂಲಕ ಮೊಬೈಲ್ ನಂಬರ್, ಇ-ಮೇಲ್ update ಗೆ ಅವಕಾಶ: 6 ತಿಂಗಳ ವರೆಗೆ ಸೌಲಭ್ಯ ಉಚಿತ!

ಪಾರ್ಟಿ ನೆಪದಲ್ಲಿ ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ : ಐವರು ಆರೋಪಿಗಳ ಬಂಧನ!

UAPA: ಪಾಕಿಸ್ತಾನ ಮೂಲದ 23 ಉಗ್ರ ಕಾರ್ಯಕರ್ತರು ಭಯೋತ್ಪಾದಕರೆಂದು ಕೇಂದ್ರ ಸರ್ಕಾರ ಘೋಷಣೆ