ಸ್ವರ್ಣಲತಾ-ಪ್ರಕಾಶ್ ರಾಜ್ 
ಸಿನಿಮಾ ಸುದ್ದಿ

ಬಹುಭಾಷಾ ನಟ ಪ್ರಕಾಶ್ ರಾಜ್‌ಗೆ ಮಾತೃ ವಿಯೋಗ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು ಇಂದು ಹೈದರಾಬಾದ್ ನಲ್ಲಿ ಕೊನೆಯುಸಿರೆಳೆದಿದ್ದಾರೆ.

ಹೈದರಾಬಾದ್: ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು ಇಂದು ಹೈದರಾಬಾದ್ ನಲ್ಲಿ ಕೊನೆಯುಸಿರೆಳೆದಿದ್ದಾರೆ.

ಗದಗ ಮೂಲದವರಾದ ತಾಯಿ ಸ್ವರ್ಣಲತಾ ಅವರು ತಮ್ಮ ತಾಯಿ ತೀರಿಕೊಂಡ ನಂತರ ಬೆಳಗಾವಿಯ ಅನಾಥಾಶ್ರಾಮದಲ್ಲಿ ಬೆಳೆದರು. ನರ್ಸಿಂಗ್ ಟ್ರೇನಿಂಗ್ ಮಾಡಿ ಬೆಂಗಳೂರಿಗೆ ಬಂದು ಜೀವನ ಕಟ್ಟಿಕೊಂಡರು. ಮಂಜುನಾಥ್ ರೈ ಎಂಬುವರ ಜೊತೆ ವಿವಾಹವಾಗಿದ್ದು ದಂಪತಿಗೆ ಮೂವರು ಮಕ್ಕಳ ಜನಿಸಿದರು. ಮೂವರ ಪೈಕಿ ಪ್ರಕಾಶ್ ರಾಜ್ ನಟನಾಗಿ ಗುರುತಿಸಿಕೊಂಡಿದ್ದಾರೆ.

ಸ್ವರ್ಣಲತಾ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿದ್ದರೆ, ಪತಿ ಮಂಜುನಾಥ್ ರೈ ಹಿಂದೂ ಆಗಿದ್ದರು. ಈ ಭಿನ್ನ ಸಂಸ್ಕೃತಿಗಳ ನಡುವೆ ಪ್ರಕಾಶ್ ರಾಜ್ ಬೆಳೆದಿದ್ದರು. ಪ್ರಕಾಶ್ ರಾಜ್ ಕುಟುಂಬದ ಹಿರಿಯ ಮಗನಾಗಿದ್ದು, ಅವರ ಸಹೋದರ ಪ್ರಸಾದ್ ರಾಜ್ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?