ವಿವೇಕ್ ಅಗ್ನಿಹೋತ್ರಿಯವರ ದಿ ಬೆಂಗಾಳ್ ಫೈಲ್ಸ್  
ಸಿನಿಮಾ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಬೆಂಗಾಲ್ ಫೈಲ್ಸ್' ಮೇ 15ಕ್ಕೆ ರಾಜ್ಯದಲ್ಲಿ ಬಿಡುಗಡೆ

ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ, ಸಿನಿಮಾ ಮುಂದಿನ ಶುಕ್ರವಾರ ಮೇ 15ರಂದು ಬಿಡುಗಡೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಬದಲಾವಣೆಯಾಗುತ್ತಿದೆ. 15 ವರ್ಷಗಳ ಕಾಲದ ಟಿಎಂಸಿ ಸರ್ಕಾರ ಅಧಿಕಾರ ಕಳೆದುಕೊಂಡು ರಾಜ್ಯದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಸರ್ಕಾರ ಬರುತ್ತಿದೆ. ಈ ಸಂದರ್ಭದಲ್ಲಿ ವಿವೇಕ್ ಅಗ್ನಿಹೋತ್ರಿ ಅವರ ದಿ ಬೆಂಗಾಲ್ ಫೈಲ್ಸ್ ಸಿನಿಮಾ ಬಿಡುಗಡೆಯಾಗುತ್ತಿದೆ.

ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ, ಸಿನಿಮಾ ಮುಂದಿನ ಶುಕ್ರವಾರ ಮೇ 15ರಂದು ಬಿಡುಗಡೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶನ ಮಾಡಿದ್ದ ವಿವೇಕ್ ಅಗ್ನಿಹೋತ್ರಿ ‘ದಿ ಬೆಂಗಾಲ್​ ಫೈಲ್ಸ್’ ನಿರ್ದೇಶನ ಮಾಡಿದ್ದರು. ಈ ಚಿತ್ರ 2025ರಲ್ಲೇ ದೇಶಾದ್ಯಂತ ಬಿಡುಗಡೆಯಾಗಿತ್ತು. ಆದರೆ, ಪಶ್ಚಿಮ ಬಂಗಾಳದಲ್ಲಿ ಮಾತ್ರ ಪ್ರದರ್ಶನಕ್ಕೆ ತೀವ್ರ ಅಡೆತಡೆಗಳು ಎದುರಾಗಿದ್ದವು.

ಮಮತಾ ಬ್ಯಾನರ್ಜಿ ನೇತೃತ್ವದ ಅಂದಿನ ತೃಣಮೂಲ ಕಾಂಗ್ರೆಸ್ ಸರ್ಕಾರ ಚಿತ್ರದ ಪ್ರದರ್ಶನಕ್ಕೆ ಪರೋಕ್ಷವಾಗಿ ತಡೆ ಒಡ್ಡಿತ್ತು. ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಧ್ವನಿ ಎತ್ತಿದ್ದರು. ಚಿತ್ರಮಂದಿರಗಳ ಮಾಲೀಕರಿಗೆ ಬೆದರಿಕೆ ಹಾಕಲಾಗುತ್ತಿದೆ ಮತ್ತು ಚಿತ್ರದ ವಿರುದ್ಧ ಉದ್ದೇಶಪೂರ್ವಕವಾಗಿ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

‘ದಿ ಬೆಂಗಾಲ್ ಫೈಲ್ಸ್’ ಚಿತ್ರವು ಪಶ್ಚಿಮ ಬಂಗಾಳದ ಇತಿಹಾಸದ ಕರಾಳ ಘಟನೆಗಳಾದ ‘ಡೈರೆಕ್ಟ್ ಆಕ್ಷನ್ ಡೇ’ (ನೇರ ಕ್ರಮ ದಿನ) ಮತ್ತು ನೋಖಾಲಿ ದಂಗೆಗಳ ಸುತ್ತ ಹೆಣೆಯಲಾದ ಕಥೆಯನ್ನು ಹೊಂದಿದೆ. ಈ ಚಿತ್ರವು ಪ್ರಚೋದನಾತ್ಮಕವಾಗಿದೆ ಎಂಬ ಟೀಕೆಗಳು ಒಂದು ಕಡೆಯಾದರೆ, ಇದು ಮರೆತುಹೋದ ಇತಿಹಾಸವನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಎಂದು ಮತ್ತೊಂದು ವರ್ಗ ಪ್ರತಿಪಾದಿಸುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ ಮತ್ತು ಪ್ರಧಾನಿ ಮೋದಿಯವರ ತೀವ್ರ ಪ್ರಚಾರದ ಫಲವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈ ರಾಜಕೀಯ ಬದಲಾವಣೆಯು ಚಿತ್ರದ ಬಿಡುಗಡೆಗೆ ಹಾದಿ ಸುಗಮಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Venezuela Earth quake: 40 ಸೆಕೆಂಡ್​​ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

ಭಾರೀ ಭೂಕಂಪಕ್ಕೆ ವೆನೆಜುವೆಲಾ ತತ್ತರ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ, ಮಾನವೀಯ ನೆರವಿಗೆ ಭಾರತ ಸಜ್ಜು..!

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!