ಭರತ್ ಕಾಂತ್ 
ಸಿನಿಮಾ ಸುದ್ದಿ

ಹೈದರಾಬಾದ್‌ನಲ್ಲಿ ಭೀಕರ ರಸ್ತೆ ಅಪಘಾತ; ತೆಲುಗು ಯುವ ನಟ ಭರತ್ ಕಾಂತ್ ಸಾವು!

ತಡರಾತ್ರಿ ಅಪಘಾತ ಸಂಭವಿಸಿದೆ. ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ: ತೆಲಂಗಾಣದ ಹೈದರಾಬಾದ್‌ನ ಆದಿಬಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಹೊರ ವರ್ತುಲ ರಸ್ತೆ (ORR) ಯ ನಿರ್ಗಮನ ಸಂಖ್ಯೆ 12ರ ಬಳಿ ನಡೆದ ರಸ್ತೆ ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ಮತ್ತು ಮತ್ತೊಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ.

ತಡರಾತ್ರಿ ಅಪಘಾತ ಸಂಭವಿಸಿದೆ. ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಿಬಟ್ಲಾ ಪೊಲೀಸರ ಪ್ರಕಾರ, 'ನಿನ್ನೆ ರಾತ್ರಿ ಔಟರ್ ರಿಂಗ್ ರೋಡ್‌ನ ನಿರ್ಗಮನ ಸಂಖ್ಯೆ 12ರಲ್ಲಿ ಭರತ್ ಕಾರಂತ್ ಅವರಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ನಾವು ಪ್ರಕರಣ ದಾಖಲಿಸಿದ್ದೇವೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದೇವೆ ಮತ್ತು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ' ಎಂದು ತಿಳಿಸಿದ್ದಾರೆ.

ಮೃತಪಟ್ಟಿರುವ ಎರಡನೇ ವ್ಯಕ್ತಿಯ ಗುರುತನ್ನು ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಲಾಗಿಲ್ಲ.

ಭರತ್ ಕಾಂತ್ 2021ರಲ್ಲಿ ತೆರೆಕಂಡ 'ಗ್ರಾಮಮ್' ಮತ್ತು 2024ರಲ್ಲಿ ತೆರೆಕಂಡ ಟೆನೆಂಟ್‌ ಚಿತ್ರಗಳಲ್ಲಿ ನಟಿಸಿದ್ದರು. ಮತ್ತು ಹೆಚ್ಚು ಜನಪ್ರಿಯತೆ ಗಳಿಸಿದ್ದರು. ಅವರು ಗೀತಾಂಜಲಿ ಮತ್ತು ಪಾರ್ವತಿ ಪರಮೇಶ್ವರಾಲು ಮುಂತಾದ ವೆಬ್ ಸರಣಿಗಳಲ್ಲಿಯೂ ಕಾಣಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್