ನಟ ದಿಲೀಪ್ ರಾಜ್  
ಸಿನಿಮಾ ಸುದ್ದಿ

Dileep Raj dies of heart attack: ಸ್ಯಾಂಡಲ್ ವುಡ್ ನಟ, ನಿರ್ಮಾಪಕ ದಿಲೀಪ್ ರಾಜ್​ ನಿಧನ

ದಿಲೀಪ್ ರಾಜ್ ನಿಧನಕ್ಕೆ (Dileep Raj Death) ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಇಂದು ಬೆಳಗ್ಗೆಯೇ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ನಸುಕಿನ ಜಾವ ಮನೆಯಲ್ಲಿದ್ದಾಗಲೇ ದಿಲೀಪ್ ರಾಜ್ ಅವರಿಗೆ ತೀವ್ರ ಹಾರ್ಟ್ ಅಟ್ಯಾಕ್ (Heart Attack) ಆಗಿತ್ತು. ಅವರಿಗೆ 47 ವರ್ಷ ವಯಸ್ಸಾಗಿತ್ತು.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟು ಹೊತ್ತಿಗೆ ಪ್ರಾಣಪಕ್ಷಿ ಹಾರಿಹೋಗಿತ್ತು. ದಿಲೀಪ್ ರಾಜ್ ನಿಧನಕ್ಕೆ (Dileep Raj Death) ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ದಿಲೀಪ್ ರಾಜ್ ಸಿನಿಪಯಣ

ದಿಲೀಪ್ ರಾಜ್ ಅವರ ಕನ್ನಡ ಚಿತ್ರರಂಗದ ಪಯಣ 2005ರಲ್ಲಿ ಬಿಡುಗಡೆಯಾದ ಬಾಯ್ ಫ್ರೆಂಡ್ ಚಿತ್ರದ ಮೂಲಕ ನಾಯಕ ನಟನಾಗಿ ಆರಂಭವಾಯಿತು. 2007ರಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಅಭಿನಯಿಸಿದ ಮಿಲನ ಚಿತ್ರದ ನಂತರ ಅವರಿಗೆ ಹೆಚ್ಚಿನ ಗುರುತು ಸಿಕ್ಕಿತು.

ನಂತರ ದಿಲೀಪ್ ರಾಜ್ ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದರು. ಅವರ ಇತ್ತೀಚಿನ ಚಿತ್ರವಾಗಿ ಲವ್ ಮಾಕ್ಟೇಲ್ 3 ಗಮನ ಸೆಳೆದಿದ್ದು, ಇದನ್ನು ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿದ್ದರು. ಈ ಚಿತ್ರ ಮಾರ್ಚ್ 16ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.

ಚಿತ್ರರಂಗದ ಜೊತೆಗೆ ಕಿರುತೆರೆಯಲ್ಲಿಯೂ ದಿಲೀಪ್ ರಾಜ್ ತಮ್ಮದೇ ಛಾಪು ಮೂಡಿಸಿದ್ದರು. ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಅವರ ಅಭಿನಯ ಅವರಿಗೆ ಮನೆಮಾತಾದ ಜನಪ್ರಿಯತೆಯನ್ನು ತಂದಿತ್ತು ಮತ್ತು ಕನ್ನಡ ಮನರಂಜನಾ ಕ್ಷೇತ್ರದಲ್ಲಿ ಖ್ಯಾತ ನಟರಾಗಿ ನೆಲೆಯೂರಿದ್ದರು.

‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು. ನಟ ದಿಲೀಪ್ ರಾಜ್ ಅವರ ನಿಧನ ನಂತರ ಅವರು ಇನ್‌ಸ್ಟಾಗ್ರಾಂನಲ್ಲಿ ಕೊನೆಯದಾಗಿ ಮಾಡಿದ್ದ ಪೋಸ್ಟ್‌ಗೆ ಚಿತ್ರರಂಗದ ಕಲಾವಿದರು ಮತ್ತು ಚಿತ್ರಪ್ರೇಮಿಗಳು ದುಃಖ ವ್ಯಕ್ತಪಡಿಸಿದರು. 2025ರ ಜನವರಿಯಲ್ಲಿ ಅವರು ತಮ್ಮ ಚಿತ್ರ ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಪೋಸ್ಟರ್ ಹಂಚಿಕೊಂಡಿದ್ದರು. ಚಿತ್ರಕ್ಕೆ ಉತ್ತಮ ವಿಮರ್ಶೆಗಳು ದೊರೆತಿದ್ದರೂ, ಪ್ರೇಕ್ಷಕರನ್ನು ಸೆಳೆಯಲು ವಿಫಲವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?

‘Dimagi Naxal’ ವಿವಾದ: ‘ಕಾಂಗ್ರೆಸ್‌ ಮಾವೋವಾದಿ ಪಕ್ಷವಾಗಿ ಬದಲಾಗುತ್ತಿದೆ’: ಕಿರಣ್‌ ರಿಜಿಜು ವಾಗ್ದಾಳಿ

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!