ಗೌರ್​​​ನಾಯ್ಡು ಅವತಾರದಲ್ಲಿ ಕರುನಾಡ ಕಿಂಗ್ 
ಸಿನಿಮಾ ಸುದ್ದಿ

ತೆಲುಗಿನ ಪೆದ್ದಿಯಲ್ಲಿ ಶಿವಣ್ಣನ ಗೆಟಪ್ ರಿಲೀಸ್..; ಗೌರ್​​​ನಾಯ್ಡು ಅವತಾರದಲ್ಲಿ ಕರುನಾಡ ಕಿಂಗ್! Video

ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಒಂದಷ್ಟು ಗ್ಲಿಂಪ್ಸ್ ನಲ್ಲಿ ರಾಮ್ ಚರಣ್ ಅವತಾರ ನೋಡಿ ಫ್ಯಾನ್ಸ್ ಎಕ್ಸೈಟ್ ಆಗಿದ್ದಾರೆ. ಪೆದ್ದಿಯಲ್ಲಿ ಶಿವರಾಜ್ ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಶಿವಣ್ಣ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೀಗ ತೆರೆಬಿದ್ದಿದೆ.

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ 'ಪೆದ್ದಿ' ಸಿನಿಮಾ ಜೂನ್ 4ರಂದು ಅದ್ದೂರಿಯಾಗಿ ಬಿಡುಗಡೆಯಾಗ್ತಿದೆ.

ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಒಂದಷ್ಟು ಗ್ಲಿಂಪ್ಸ್ ನಲ್ಲಿ ರಾಮ್ ಚರಣ್ ಅವತಾರ ನೋಡಿ ಫ್ಯಾನ್ಸ್ ಎಕ್ಸೈಟ್ ಆಗಿದ್ದಾರೆ. ಪೆದ್ದಿಯಲ್ಲಿ ಶಿವರಾಜ್ ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಶಿವಣ್ಣ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೀಗ ತೆರೆಬಿದ್ದಿದೆ.

ಗೌರ್‌ನಾಯ್ಡು ಎಂಬ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಕುಸ್ತಿ ಅಖಾಡದಲ್ಲಿ ಅವರು ಕಾಣಿಸಿಕೊಂಡಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚು‌ ಮಾಡಿದೆ. ಮೇಕಿಂಗ್ ವಿಡಿಯೋದಲ್ಲಿ ಶಿವಣ್ಣ-ರಾಮ್ ಚರಣ್ ಒಟ್ಟಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಇವರಿಬ್ಬರನ್ನು ನೋಡಿ ಥ್ರಿಲ್ ಆಗಿದ್ದಾರೆ.

ಉಪ್ಪೆನ ಸಿನಿಮಾವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್‌ಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ. ಇನ್ನುಳಿದಂತೆ, ಜಗಪತಿ ಬಾಬು, ದಿವೇಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾಗೆ ಎ.ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ʻವೃದ್ಧಿ ಸಿನಿಮಾಸ್ʼ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ʻಮೈತ್ರಿ ಮೂವೀ ಮೇಕರ್ಸ್ʼ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರಕ್ಕೆ ಬೆಂಬಲವಾಗಿ ನಿಂತಿವೆ. ಆರ್ ರತ್ನವೇಲು ಛಾಯಾಗ್ರಹಣ, ನವೀಲ್ ನೂಲಿ ಸಂಕಲನ‌ ಚಿತ್ರಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್