ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್! 
ಸಿನಿಮಾ ಸುದ್ದಿ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

ಕರ್ನಾಟಕ ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ನಟ ರಣವೀರ್ ಸಿಂಗ್ ಅವರು ಇಂದು ಬೆಳಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಮೈಸೂರು: ಕಾಂತಾರ ಚಾಪ್ಟರ್‌-1 ಚಿತ್ರದ ದೈವಕ್ಕೆ ಅಪಮಾನ ಮಾಡಿದ ಆರೋಪ ಮತ್ತು ಫರ್ಹಾನ್ ಅಖ್ತರ್ ಅವರ ಡಾನ್ 3 ಚಿತ್ರದಿಂದ ಕೊನೆಯ ಕ್ಷಣದಲ್ಲಿ ಹಿಂದೆ ಸರಿದ ಆರೋಪದ ಮೇಲೆ ಬಾಲಿವುಡ್​ನಿಂದ ಬ್ಯಾನ್ ಮಾಡಿದ ಬೆನ್ನಲ್ಲೇ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷಮೆಯಾಚಿಸಿದ್ದಾರೆ.

ಕರ್ನಾಟಕ ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ನಟ ರಣವೀರ್ ಸಿಂಗ್ ಅವರು ಇಂದು ಬೆಳಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು ಮತ್ತು ಕ್ಷಮೆ ಕೋರಿದ್ದಾರೆ ಎಂದು ವರದಿಯಾಗಿದೆ.

ಕಾಂತಾರ-1 ಚಿತ್ರದಲ್ಲಿ ದೈವಕ್ಕೆ ಅಪಮಾನ ಮಾಡಿದ ಪ್ರಕರಣದಲ್ಲಿ ರಣವೀರ್ ಸಿಂಗ್ ಅವರು ಬೇಷರತ್ ಕ್ಷಮೆಯಾಚಿಸಿದ ನಂತರ ನಟನ ವಿರುದ್ಧದ ವಿಚಾರಣೆಯನ್ನು ಹೈಕೋರ್ಟ್ ಕಳೆದ ತಿಂಗಳು ರದ್ದುಗೊಳಿಸಿತ್ತು.

ಈ ಪ್ರಕರಣ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ, ರಣವೀರ್ ಸಿಂಗ್ ಸ್ವತಃ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷಮೆ ಕೇಳುವುದಾಗಿ ತಿಳಿಸಿದ್ದರು.

ಅದರಂತೆ ರಣವೀರ್ ಸಿಂಗ್ ಅವರು ಇಂದು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ, ಕ್ಷಮೆಯಾಚಿಸಿದ್ದಾರೆ.

ಏನಿದು ಪ್ರಕರಣ?

ಗೋವಾ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ರಣವೀರ್‌ ಸಿಂಗ್‌ ನಟ ರಿಷಬ್‌ ಶೆಟ್ಟಿ ಮುಂದೆಯೇ ಮಾತನಾಡಿದ್ದರು. ರಿಷಬ್ ಅವರ ಕಾಂತಾರ ಸಿನಿಮಾವನ್ನ ಥಿಯೇಟರ್‌ನಲ್ಲಿ ನಾನು ನೋಡಿದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್‌ ಸಿಂಗ್‌ ಅನುಕರಣೆ ಮಾಡಿದ್ದರು. ರಣವೀರ್‌ ಮಾಡಿದ ಅಪಹಾಸ್ಯಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್