ದಿಢೀರನೇ ತಮ್ಮ ಮದುವೆ ಸುದ್ದಿ ಹಂಚಿಕೊಳ್ಳುವ ಮೂಲಕ ‘ಪವಿತ್ರ ಬಂಧನ’ ಧಾರಾವಾಹಿ ನಟಿ ಅಮೂಲ್ಯ ಭಾರಧ್ವಜ್ ಅಭಿಮಾನಿಗಳಿಗೆ ಅಚ್ಚರಿಯ ಸಿಹಿ ಸುದ್ದಿ ನೀಡಿದ್ದಾರೆ. ಅಮೂಲ್ಯ, ಹರ್ಷಿತ್ ಪೋರೆಚಾ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮೈಸೂರು ಮೂಲದ ಅಮೂಲ್ಯ ಭಾರದ್ವಾಜ್ ಬಿಕಾಂ ಪದವೀಧರೆಯಾಗಿದ್ದು 'ಪುರಂದರದಾಸ' ಧಾರಾವಾಹಿಯ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ಇನ್ನು ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಸಂಪ್ರದಾಯಬದ್ಧವಾಗಿ ಅದ್ಧೂರಿಯಾಗಿ ವಿವಾಹ ನೆರವೇರಿದೆ. ಮದುವೆಯ ಸುಂದರ ಕ್ಷಣಗಳ ಫೋಟೊಗಳನ್ನು ಅಮೂಲ್ಯ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.Kannada television actress Amulya Bharadwaj has tied the knot with Harshit Porecha
ಅಮೂಲ್ಯ 'ಬೃಂದಾವನ' ಧಾರಾವಾಹಿಯಲ್ಲಿ ನಾಯಕಿಯಾಗಿ ಕಾಣಿಸಿಕೊಂಡು ತಮ್ಮ ಮುಗ್ಧ ಅಭಿನಯದ ಮೂಲಕ ಮನೆಮಾತಾಗಿದ್ದರು. ಇದೀಗ 'ಪವಿತ್ರ ಬಂಧನ' ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಭಿಮಾನಿಗಳು ನೆಚ್ಚಿನ ನಟಿಯ ಮದುವೆಗೆ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯ ತಿಳಿಸುತ್ತಿದ್ದಾರೆ.