ಸ್ಯಾಂಡಲ್ವುಡ್ ನಟಿ ಶರ್ಮಿಳಾ ಮಾಂಡ್ರೆ ಹಾಗೂ ತಮಿಳು ಚಿತ್ರ ನಿರ್ಮಾಪಕ ಸುಧನ್ ಸುಂದರಂ ದಂಪತಿ ತಮ್ಮ ಫ್ಯಾನ್ಸ್ಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ. ಮದುವೆಯಾದ 4 ತಿಂಗಳಲ್ಲೇ ಈ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಈ ಸುದ್ದಿಯನ್ನು ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಶರ್ಮಿಳಾ ಮತ್ತು ಪತಿ ಸುಧನ್ ಸುಂದರಂ ಪರಸ್ಪರ ಕೈಹಿಡಿದುಕೊಂಡಿದ್ದು, ತಮ್ಮ ಬೆರಳುಗಳಲ್ಲಿ ಪುಟ್ಟ ಮಗುವಿನ ಬಿಳಿ ಬಣ್ಣದ ಬೂಟುಗಳನ್ನು ಧರಿಸಿರುವುದು ಕಂಡುಬಂದಿದೆ. ಅದರೊಂದಿಗೆ 'ಮುಂದೆ ಪುಟ್ಟ ಹೆಜ್ಜೆಗಳು ಎಂದು ಬರೆದುಕೊಂಡಿದ್ದಾರೆ.
ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು, ಸಿನಿ ತಾರೆಯರು ಹಾಗೂ ಸ್ನೇಹಿತರು ದಂಪತಿಗೆ ಶುಭಾಶಯ ಕೋರುತ್ತಿದ್ದಾರೆ.
ಶರ್ಮಿಳಾ ಮಾಂಡ್ರೆ ಹಾಗೂ ಸುಧನ್ ಸುಂದರಂ ಜುಲೈ 12 ರಂದು ಜೈಪುರದ ಸಮೋದ್ ಅರಮನೆಯಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು. ಮದುವೆಗೂ ಮುನ್ನ 2026ರ ಜೂನ್ 25 ರಂದು ಬೆಂಗಳೂರಿನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಈ ಜೋಡಿ ಅಧಿಕೃತವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು.