ಪಾರ್ಕ್ ನಲ್ಲಿ ಅಪ್ರಾಪ್ತ ಬಾಲಕಿಯರಿಗೆ ಮರ್ಮಾಂಗ ಪ್ರದರ್ಶನ: POCSO ಕೇಸ್ ನಲ್ಲಿ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು!
ತ್ರಿಶೂರ್‌ನ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ-2 ಈ ತೀರ್ಪು ನೀಡಿದ್ದು, 2022ರ ಜುಲೈ 4ರಂದು ತ್ರಿಶೂರ್‌ನ ಅಯ್ಯಂತೋಲ್ ಪ್ರದೇಶದ ಎಸ್‌ಎನ್ ಪಾರ್ಕ್ ಬಳಿ ಈ ಘಟನೆ ನಡೆದಿತ್ತು. 14 ಮತ್ತು 9 ವರ್ಷದ ಇಬ್ಬರು ಬಾಲಕಿಯರ..
ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರ ಮುಂದೆ ಅಸಭ್ಯವಾಗಿ ವರ್ತಿಸಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಅಲ್ಲದೆ, 50 ಸಾವಿರ ರೂ. ದಂಡವನ್ನೂ ವಿಧಿಸಿ ಸೋಮವಾರ (ನ.23) ತೀರ್ಪು ಪ್ರಕಟಿಸಿದೆ.
ತ್ರಿಶೂರ್‌ನ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ-2 ಈ ತೀರ್ಪು ನೀಡಿದ್ದು, 2022ರ ಜುಲೈ 4ರಂದು ತ್ರಿಶೂರ್‌ನ ಅಯ್ಯಂತೋಲ್ ಪ್ರದೇಶದ ಎಸ್‌ಎನ್ ಪಾರ್ಕ್ ಬಳಿ ಈ ಘಟನೆ ನಡೆದಿತ್ತು. 14 ಮತ್ತು 9 ವರ್ಷದ ಇಬ್ಬರು ಬಾಲಕಿಯರ ಮುಂದೆ ನಟ ಅಸಭ್ಯವಾಗಿ ವರ್ತಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಈ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 509 ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 11(1)ರ ಅಡಿಯಲ್ಲಿ ನಟನನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. ಅಲ್ಲದೆ ದಂಡದ ಮೊತ್ತವನ್ನು ಸಂತ್ರಸ್ತ ಬಾಲಕಿಯರಿಗೆ ಹಂಚಿಕೊಡುವಂತೆ ಸೂಚಿಸಿದೆ.
ಆದರೆ, ಮೇಲಿನ ನ್ಯಾಯಾಲಯದಲ್ಲಿ ತೀರ್ಪು ಪ್ರಶ್ನಿಸಲು ಅವಕಾಶ ನೀಡುವ ಉದ್ದೇಶದಿಂದ ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ. ನಟನಿಗೆ ಜಾಮೀನನ್ನೂ ಮಂಜೂರು ಮಾಡಲಾಗಿದೆ.
ಸಿಸಿಟಿವಿ ದೃಶ್ಯಗಳೇ ಪ್ರಮುಖ ಸಾಕ್ಷ್ಯ
ಪ್ರಕರಣದ ತನಿಖೆಯಲ್ಲಿ ಎಸ್‌ಎನ್ ಪಾರ್ಕ್ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಪ್ರಮುಖ ಸಾಕ್ಷ್ಯವಾಗಿದ್ದವು. ಕಪ್ಪು ಬಣ್ಣದ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬರು ಅಸಭ್ಯವಾಗಿ ವರ್ತಿಸಿದ್ದರು ಎಂದು ಬಾಲಕಿಯರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದರು.
ಈ ಸುಳಿವಿನ ಆಧಾರದ ಮೇಲೆ ಪೊಲೀಸರು ಕಾರಿನ ಬಗ್ಗೆ ತನಿಖೆ ನಡೆಸಿದಾಗ ನಟ ಶ್ರೀಜಿತ್ ರವಿ ಅವರ ಹೆಸರು ಬೆಳಕಿಗೆ ಬಂದಿತ್ತು. ಬಳಿಕ ಅವರನ್ನು ವಶಕ್ಕೆ ಪಡೆದು ಬಂಧಿಸಲಾಗಿತ್ತು. ನಂತರ ಅವರಿಗೆ ಜಾಮೀನು ದೊರೆತಿತ್ತು.
ಪ್ರಕರಣದ ವಿಚಾರಣೆ ವೇಳೆ ಒಟ್ಟು 21 ಸಾಕ್ಷಿಗಳನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿತ್ತು. ನಟನಿಗೆ ವಿಧಿಸಿರುವ 50 ಸಾವಿರ ರೂ. ದಂಡದ ಮೊತ್ತವನ್ನು ಸಂತ್ರಸ್ತ ಇಬ್ಬರು ಬಾಲಕಿಯರಿಗೆ ಹಂಚಿಕೆ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.