ದರ್ಶನ್‌ಗೆ ಕಾನೂನು ಸಂಕಷ್ಟ: 'ಆದಿಯೋಗಿ', ದರ್ಗಾ ಮೊರೆಹೋದ ವಿಜಯಲಕ್ಷ್ಮಿ ದರ್ಶನ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅವರನ್ನು ಕಾನೂನು ಸಂಕಷ್ಟದಿಂದ ಪಾರು ಮಾಡುವಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಿದ್ದಾರೆ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅವರನ್ನು ಕಾನೂನು ಸಂಕಷ್ಟದಿಂದ ಪಾರು ಮಾಡುವಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಿದ್ದಾರೆ. ಚಿಕ್ಕಬಳ್ಳಾಪುರದ ಆದಿಯೋಗಿ ಕೇಂದ್ರಕ್ಕೆ ಇದೀಗ ವಿಜಯಲಕ್ಷ್ಮಿ ಭೇಟಿಕೊಟ್ಟಿದ್ದು ಅಲ್ಲಿನ ದೃಶ್ಯವನ್ನ ತಮ್ಮ ಸೋಷಿಯಲ್ ಮೀಡಿಯಾ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿರುವ ವಿಜಯಲಕ್ಷ್ಮಿ, 'ನಿನ್ನ ಚಿಂತೆಗಳನ್ನೆಲ್ಲ ಅವನಿಗೆ ಒಪ್ಪಿಸಿಬಿಡು, ಅವನ ಸಮಯದಲ್ಲಿ ನಂಬಿಕೆಯಿಡು' ಎಂದು ಇಂಗ್ಲಿಷ್‌ನಲ್ಲಿ ಬರೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ವಿಜಯಲಕ್ಷ್ಮಿ ದರ್ಗಾಕ್ಕೂ ಭೇಟಿಕೊಟ್ಟಿದ್ದು ಇದೀಗ ಚಿಕ್ಕಬಳ್ಳಾಪುರದ ಆದಿಯೋಗಿ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ.
ಈ ಹಿಂದೆ ಹಣಕಾಸು ವಿಚಾರಕ್ಕೆ ನಟ ಧನ್ವೀರ್ ಹಾಗೂ ವಿಜಯಲಕ್ಷ್ಮಿ ನಡುವಿನ ಮುಸುಕಿನ ಗುದ್ದಾಟ ನಡೆದಿತ್ತು. ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಅವರು ನಗರದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ದೂರು ದಾಖಲಿಸಿದ್ದರು.