ಯುಟ್ಯೂಬರ್ 'ಅಮುಕು ಡುಮುಕು' ಮಂಜು ವಿರುದ್ಧ ಮತ್ತೊಂದು FIR ದಾಖಲು
ಗಲಾಟೆ ವಿಚಾರವಾಗಿ ಕನ್ನಡದ ಯುಟ್ಯೂಬರ್ ಅಮುಕು ಡುಮುಕು ಮಂಜು ವಿರುದ್ಧ ಇದೀಗ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪಕ್ಕದ ಮನೆಯವರ ಜೊತೆ ಗಲಾಟೆ ಮಾಡಿದ್ದು ಈ ವಿಚಾರವಾಗಿ ವಿಕ್ರಂ ಎಂಬುವವರು ನೀಡಿದ ದೂರಿನ ಆಧಾರದ...
ಬೆಂಗಳೂರು: ಗಲಾಟೆ ವಿಚಾರವಾಗಿ ಕನ್ನಡದ ಯುಟ್ಯೂಬರ್ ಅಮುಕು ಡುಮುಕು ಮಂಜು ವಿರುದ್ಧ ಇದೀಗ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪಕ್ಕದ ಮನೆಯವರ ಜೊತೆ ಗಲಾಟೆ ಮಾಡಿದ್ದು ಈ ವಿಚಾರವಾಗಿ ವಿಕ್ರಂ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಅಮುಕು ಡುಮುಕು ಮಂಜುನಾಥ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಜುನಾಥ್ ತಮ್ಮ ಸಿದ್ದ ಎಂಬಾತನ ವಿಚಾರವಾಗಿ ಮಂಜುನಾಥ್ ಪಕ್ಕದ ಮನೆಯವರ ಜೊತೆ ಗಲಾಟೆ ಮಾಡಿದ್ದಾನೆ. ಈ ವೇಳೆ ಎರಡು ಮನೆಯವರ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ.
ಗಲಾಟೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮಂಜುನಾಥ್ ಕೂಡ ವಿಕ್ರಂ ವಿರುದ್ಧ ದೂರು ನೀಡಿದ್ದು, ದೂರು-ಪ್ರತಿದೂರು ದಾಖಲಾಗಿದೆ. ಸದ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ ಪಬ್ನಲ್ಲಿ ಗಲಾಟೆ ವಿಚಾರವಾಗಿ ಅಮುಕು ಡುಮುಕು ಮಂಜು ವಿರುದ್ಧ ಪ್ರಕರಣ ದಾಖಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.