ಜಯಲಲಿತಾ ಉತ್ತರಾಧಿಕಾರಿ ತ್ರಿಷಾ: ಅಭಿಮಾನಿಗಳ ಘೋಷಣೆ ಬೆನ್ನಲ್ಲೇ ಶೃಂಗೇರಿ ಶಾರದಾಂಬೆ ದರ್ಶನ ಪಡೆದ ನಟಿ!
ಬಹುಭಾಷಾ ನಟಿ ತ್ರಿಷಾ ಕೃಷ್ಣನ್ (Trisha Krishnan) ಅವರು ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ದೀಪಾಲಂಕೃತ ರಾಜಗೋಪುರದ ಮುಂದೆ ಫೋಟೋ ತೆಗೆದುಕೊಂಡಿದ್ದಾರೆ.
ಚಿಕ್ಕಮಗಳೂರು: ಬಹುಭಾಷಾ ನಟಿ ತ್ರಿಷಾ ಕೃಷ್ಣನ್ (Trisha Krishnan) ಅವರು ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ದೀಪಾಲಂಕೃತ ರಾಜಗೋಪುರದ ಮುಂದೆ ಫೋಟೋ ತೆಗೆದುಕೊಂಡಿದ್ದಾರೆ. ಗುಲಾಬಿ ಬಣ್ಣದ ಸಲ್ವಾರ್‌ನಲ್ಲಿ ಕ್ಲಿಕ್ಕಿಸಿಕೊಂಡ ಈ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು 'ಡಿವೈನ್' ಎಂದು ಬರೆದುಕೊಂಡಿದ್ದಾರೆ.
ದಕ್ಷಿಣ ಭಾರತದ ಚಿತ್ರರಂಗದಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟಿ ತ್ರಿಷಾ ಕೃಷ್ಣನ್ ಇದೀಗ ರಾಜಕೀಯ ವಿಚಾರವಾಗಿ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಉತ್ತರಾಧಿಕಾರಿ ಎಂದೇ ತ್ರಿಷಾ ಅವರನ್ನು ಬಿಂಬಿಸಿರುವ ಅಭಿಮಾನಿಗಳು, ಅವರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸುತ್ತಿದ್ದಾರೆ.
ನನಗೂ ಮದುವೆಯಾಗುವ ಆಸೆಯಿದೆ, ಆದರೆ...: ಲವ್, ರಿಲೇಶನ್‌ಶಿಪ್ ಬಗ್ಗೆ ಸೌತ್ ಬ್ಯೂಟಿ ನಿತ್ಯಾ ಮೆನನ್ ಮಾತು ವೈರಲ್!
ಅಷ್ಟೇ ಅಲ್ಲ, 'ಇಳಯ ಪುರಚ್ಚಿ ತಲೈವಿ ತ್ರಿಷಾ' ಎಂಬ ಹೆಸರಿನಲ್ಲಿ ಹೊಸ ವೇದಿಕೆಯನ್ನೂ ಆರಂಭಿಸಿದ್ದಾರೆ. ಈ ಬೆಳವಣಿಗೆ ತಮಿಳುನಾಡಿನ ರಾಜಕೀಯ ಹಾಗೂ ಸಿನಿಮಾ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.