ದರ್ಶನ್, ವಿಜಯಲಕ್ಷ್ಮೀ, ಧನ್ವೀರ್ ಗೌಡ 
ಸಿನಿಮಾ ಸುದ್ದಿ

ದರ್ಶನ್ ಬಗ್ಗೆ ವಿಜಯಲಕ್ಷ್ಮೀ ಪೋಸ್ಟ್‌ ಬೆನ್ನಲ್ಲೇ 'ಶಕುನಿ' ಅಂತ ಪೋಸ್ಟ್ ಹಾಕಿದ ನಟ ಧನ್ವೀರ್ ಗೌಡ; ಯಾರಿಗೆ ಟಾಂಗ್?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್ ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನು ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಟ ಧನ್ವೀರ್ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಟನಿಗೆ ಬೆನ್ನೆಲುಬಾಗಿ ನಿಂತಿದ್ದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್ ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನು ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಟ ಧನ್ವೀರ್ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಟನಿಗೆ ಬೆನ್ನೆಲುಬಾಗಿ ನಿಂತಿದ್ದರು. ಆದರೆ ಈಗ ಅವರು ಮಾಡಿರುವ ಪೋಸ್ಟ್‌ಗಳು ಭಾರೀ ಚರ್ಚೆಗೆ ಕಾರಣವಾಗಿದೆ.

ವಿಜಯದಶಮಿ ಪ್ರಯುಕ್ತ ಪೋಸ್ಟ್ ಮಾಡಿದ್ದ ವಿಜಯಲಕ್ಷ್ಮೀ ದರ್ಶನ್ ಅವರು, ನಿಮ್ಮ ಡಿಬಾಸ್ ಹೆಸರು ಮೆಚ್ಚುಗೆಗಿರಲಿ, ಟೀಕೆಗಿರಲಿ, ಸ್ವಹಿತ ಸಾಧನೆಯ ಸಾಧನವಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಅಭಿಪ್ರಾಯದಲ್ಲಿ ಪ್ರಾಮಾಣಿಕತೆ ಇರಲಿ, ಮಾತಿನಲ್ಲಿ ಗೌರವಿರಲಿ'. ಎಲ್ಲರಿಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು ಅಂತ ಶುಭಕೋರಿದ್ದರು.

ವಿಜಯಲಕ್ಷ್ಮೀ ದರ್ಶನ್ ಅವರ ಪೋಸ್ಟ್ ಬೆನ್ನಲ್ಲೇ ಧನ್ವೀರ್ ಗೌಡ ಹಾಕಿಕೊಂಡಿರುವ ಸ್ಟೇಟಸ್ ಭಾರೀ ಚರ್ಚೆಗೆ ಕಾರಣವಾಗಿದೆ. ದಸರಾ ಶುಭಾಶಯ ಕೋರುವ ಭಾಗವಾಗಿ ಇಬ್ಬರೂ ಸಹ ಒಬ್ಬರಿಗೊಬ್ಬರು ಟಾಂಗ್ ಕೊಡುವಂತೆ ಮಾರ್ಮಿಕವಾಗಿ ಪೋಸ್ಟ್‌ ಮಾಡಿದ್ದಾರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ. ಇದಕ್ಕೆ ಕಾರಣವಾಗಿದ್ದು ಕಳೆದ ಕೆಲವು ದಿನಗಳಿಂದ ಧ್ವನೀರ್‌ ಗೌಡ ಹಾಗೂ ದರ್ಶನ್ ಸಂಬಂಧ ಉತ್ತಮವಾಗಿಲ್ಲ ಎನ್ನುವುದು.

ನಟ ಧನ್ವೀರ್ ಗೌಡ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೇಟಸ್‌ನಲ್ಲಿ "ಕೆಲವರಿರುತ್ತಾರೆ ಶಕುನಿ ಅಂತವರು ಕೊನೆವರೆಗೂ ಆಟವಾಡಿ ತಾವೇ ಸಂತ್ರಸ್ತರಂತೆ ನಟಿಸುತ್ತಾರೆ. ಸತ್ಯಕ್ಕೆ ಯಾವೊತ್ತೂ ಸಾಕ್ಷಿ ಬೇಕಾಗಿಲ್ಲ. ಕಾಲವೇ ಉತ್ತರ ಕೊಡುತ್ತದೆ ನಾಡಿನ ಸಮಸ್ತ ಜನತೆಗೆ ದಸರಾ ಹಾಗೂ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು ಅಂತ ಇನ್‌ಸ್ಟಾಗ್ರಾಮ್‌ನಲ್ಲಿ ನಟ ಧನ್ವೀರ್ ಪೋಸ್ಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾ: ವೈಭವದ ಜಂಬೂ ಸವಾರಿ ಮೆರವಣಿಗೆ; ಮೊದಲ ಬಾರಿಗೆ ಅಂಬಾರಿ ಹೊತ್ತು ಸಾಗಿದ ಪ್ರಶಾಂತ ಆನೆ, ಲಕ್ಷಾಂತರ ಜನರಿಂದ ವೀಕ್ಷಣೆ! Video

CJPಗೆ ಬಿಗ್ ರಿಲೀಫ್: ಅಶುತೋಷ್ ರಾಂಕಾ, ಸೌರವ್ ದಾಸ್ ಬಿಡುಗಡೆ ಮಾಡುವಂತೆ SEM ಆದೇಶ

'ಹರ್ ಗಲಿ ಮೇ ಜಂತರ್ ಮಂತರ್': SIR ವಿರುದ್ಧದ ಪ್ರತಿಭಟನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಭಾಗಿ!

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಇಬ್ಬರು ಯುವತಿಯರು ಸೇರಿದಂತೆ ಮತ್ತೆ ಐವರ ಬಂಧನ!

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ: ತಾಯಿ ಚಾಮುಂಡೇಶ್ವರಿಗೆ CM ಡಿಕೆ ಶಿವಕುಮಾರ್ ಪುಷ್ಪಾರ್ಚನೆ