ರಾಹುಲ್ ದ್ರಾವಿಡ್ 
ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ರಾಹುಲ್ ದ್ರಾವಿಡ್?

ಭಾರತದ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲು ಬಿಸಿಸಿಐ ಒಲವು ತೋರಿದೆ....

ನವದೆಹಲಿ: ಭಾರತದ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲು ಬಿಸಿಸಿಐ ಒಲವು ತೋರಿದೆ. 
ಸುದ್ದಿ ಮಾಧ್ಯಮವೊಂದರ ವರದಿ ಪ್ರಕಾರ ಭಾರತೀಯ ಕ್ರಿಕೆಟ್ ತಂಡದ ಸಲಹಾ ಸಮಿತಿ ಕೂಡಾ ರಾಹುಲ್ ದ್ರಾವಿಡ್‌ರನ್ನು ಕೋಚ್ ಸ್ಥಾನಕ್ಕೆ ಶಿಫಾರಸು ಮಾಡಿದೆ. ಸಲಹಾ ಸಮಿತಿಯಲ್ಲಿರುವ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ತಮ್ಮ ಗೆಳೆಯನನ್ನು ಕೋಚ್ ಸ್ಥಾನದಲ್ಲಿ ಕೂರಿಸಲು ಕಾತುರರಾಗಿದ್ದಾರೆ.
ಈಗಾಗಲೇ ದ್ರಾವಿಡ್ ಇಂಡಿಯಾ ಎ ಮತ್ತು ಇಂಡಿಯಾ ಅಂಡರ್ 19 ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ದ್ರಾವಿಡ್ ನೇತೃತ್ವದ ಅಂಡರ್ 19 ತಂಡ ಈ ಬಾರಿ ವಿಶ್ವಕಪ್ ಫೈನಲ್‌ಗೆ ತಲುಪಿದ್ದರೂ, ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವುರುದ್ಧ ಪರಾಭವಗೊಂಡಿತ್ತು.
ವಿಶೇಷವಾಗಿ ಟೆಸ್ಟ್ ಕ್ರಿಕೆಟ್‌ಗೆ ಉತ್ತಮ ಮಾರ್ಗದರ್ಶನ ನೀಡುವ ಭಾರತೀಯನನ್ನೇ ನೇಮಕ ಮಾಡಬೇಕೆಂಬುದು ಬಿಸಿಸಿಐ ಆಗ್ರಹವಾಗಿದ್ದು, ರಾಹುಲ್ ಇದಕ್ಕೆ ಸಮರ್ಥರು ಎಂದು ಬಲ್ಲಮೂಲಗಳು ಹೇಳಿವೆ. 
ಒಂದು ವೇಳೆ ರಾಹುಲ್‌ಗೆ ಈ ಸ್ಥಾನ ದೊರೆತರೆ, 2019ರಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್‌ವರೆಗೆ ಅವರ ಸಾರಥ್ಯ ಟೀಂ ಇಂಡಿಯಾಗೆ ದಕ್ಕುವಂತೆ ಮಾಡಲಾಗುವುದು ಎಂಬ ಸುದ್ದಿಯೂ ಕೇಳಿಬರುತ್ತಿದೆ.
ಏಪ್ರಿಲ್ 5 ರಂದು ಸಲಹಾ ಸಮಿತಿ ಸಭೆ ಸೇರಲಿದ್ದು, ಮುಖ್ಯ ಕೋಚ್ ನೇಮಕದ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. 
ಭಾರತದ ಕೋಚ್ ಆಗಿದ್ದ ಡಂಕನ್ ಫ್ಲೆಚರ್‌ನ ಜವಾಬ್ದಾರಿ 2015 ಐಸಿಸಿ ವಿಶ್ವಕಪ್  ಪಂದ್ಯ ಮುಕ್ತಾಯದ ಹೊತ್ತಿಗೆ ಮುಗಿದಿತ್ತು. 
ಸದ್ಯ ರಾಹುಲ್ ದ್ರಾವಿಡ್ ಐಪಿಎಲ್ ತಂಡ ಡೆಲ್ಲಿ ಡೇರ್‌ಡೆವಿಲ್ಸ್‌ನ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ