ಧೋನಿ-ಕೊಹ್ಲಿ ನಿಮ್ಮ ಬಗ್ಗೆ ಹೆಮ್ಮೆ ಇದೆ ಎಂದು ಕೂಗಿದ ಅಭಿಮಾನಿಗಳು
ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸೋತು ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಆದರೂ ಅಭಿಮಾನಿಗಳು ಟೀಂ...
ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸೋತು ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಆದರೂ ಅಭಿಮಾನಿಗಳು ಟೀಂ ಇಂಡಿಯಾ ಆಟಗಾರರನ್ನು ಅಭಿನಂದಿಸಿದ್ದಾರೆ.
ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ರನ್ ಗಳಿಸಿದ್ದರು. ವೆಸ್ಟ್ ಇಂಡೀಸ್ ವಿರುದ್ಧ ಸೋಲು ಕಂಡಿತ್ತು. ಇದರಿಂದ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿತ್ತು. ಇದರಿಂದ ಅಭಿಮಾನಿಗಳು ತಮ್ಮ ವಿರುದ್ಧ ಮಾತನಾಡುತ್ತಾರೆ ಎಂಬ ಭಾವಿಸಿದ್ದ ಟೀಂ ಇಂಡಿಯಾ ಆಟಗಾರರಿಗೆ ಅಚ್ಚರಿ ಕಾದಿತ್ತು.
ಟೀಂ ಇಂಡಿಯಾ ಆಟಗಾರರಾದ ಆಶಿಶ್ ನೆಹ್ರಾ, ಎಂಎಸ್ ಧೋನಿ, ಜಸ್ಪ್ರೀತ್ ಬುಮ್ರಾ ಜತೆ ಮುಂಬೈ ವಿಮಾನಕ್ಕೆ ಬಂದ ಸ್ಫೋಟಕ ಬ್ಯಾಟ್ ಮನ್ ವಿರಾಟ್ ಕೊಹ್ಲಿಗೆ ಅಭಿಮಾನಿಗಳು ನಮಸ್ತೆ. ಧೋನಿ, ಧೋನಿ ಹಾಗೂ ಕೊಹ್ಲಿ.. ಕೊಹ್ಲಿ.. ಎಂದು ಜೋರಾಗಿ ಕೂಗಿದರು. ಜತೆಗೆ ಕೊಹ್ಲಿ ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಜೈಕಾರ ಹಾಕಿದರು.
ಏಷ್ಯಾಕಪ್ ಹಾಗೂ ಟಿ20 ಪಂದ್ಯಾವಳಿಯಲ್ಲಿ ಭಾರತ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕಿಸ್ತಾನ ತಂಡ ಇಸ್ಲಾಮಾಬಾದ್ ವಿಮಾನ ನಿಲ್ದಾಣಕ್ಕೆ ತೆರಳಿದಾಗ ಅಲ್ಲಿನ ಅಭಿಮಾನಿಗಳು ಶೇಮ್... ಶೇಮ್ ಎಂದು ಹೀಯಾಳಿಸಿದ್ದರು. ಆದರೆ ಟೀಂ ಇಂಡಿಯಾ ಅಭಿಮಾನಿಗಳು ಭಾರತ ಸೋತರು, ಗೆದ್ದರು ಬೆನ್ನು ತಟ್ಟುತ್ತಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ.