ಶಾಹೀದ್ ಅಫ್ರಿದಿ 
ಕ್ರಿಕೆಟ್

ಪಾಕ್ ಕ್ರಿಕೆಟ್ ತಂಡದ ನಾಯಕತ್ವಕ್ಕೆ ಶಾಹೀದ್ ಅಫ್ರಿದಿ ಗುಡ್ ಬೈ

ಪಾಕಿಸ್ತಾನ ಟಿ20 ಕ್ರಿಕೆಟ್ ತಂಡದ ನಾಯಕ ಶಾಹಿದ್ ಅಫ್ರಿದಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ.ವಿಶ್ವ ಟ್ವೆಂಟಿ–20 ಕ್ರಿಕೆಟ್ ಟೂರ್ನಿ..

ನವದೆಹಲಿ: ಪಾಕಿಸ್ತಾನ ಟಿ20 ಕ್ರಿಕೆಟ್ ತಂಡದ ನಾಯಕ ಶಾಹಿದ್ ಅಫ್ರಿದಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ.ವಿಶ್ವ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯಲ್ಲಿ ನೀಡಿದ ಕಳಪೆ ಪ್ರದರ್ಶನಕ್ಕೆ ಸಾಕಷ್ಟು ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಹೀದ್ ಅಫ್ರಿದಿ ಅವರು ಪಾಕಿಸ್ತಾನ ಚುಟುಕು ಕ್ರಿಕೆಟ್ ತಂಡದ ನಾಯಕತ್ವವನ್ನು ಭಾನುವಾರ ತೊರೆದಿದ್ದಾರೆ.

ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯಲ್ಲಿ ಅಫ್ರಿದಿ ನೇತೃತ್ವದ ಪಾಕ್ ತಂಡವು ಸೆಮಿಫೈನಲ್ ಪ್ರವೇಶಿಸುವಲ್ಲಿ ವಿಫಲವಾಗಿತ್ತು. ಭಾರತದ ಅಭಿಮಾನಿಗಳ ಪ್ರೀತಿಯನ್ನು ಹೊಗಳಿದ್ದಕ್ಕೂ ಮಾಜಿ ಕ್ರಿಕೆಟಿಗರಿಂದ ಟೀಕೆ ಎದುರಿಸಿದ್ದರು. ಈ ಬೆನ್ನಲ್ಲೆ, ನಾಯಕತ್ವ ತೊರೆಯುವ ಕುರಿತು ಸ್ವತಃ ಅಫ್ರಿದಿ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ(ಪಿಸಿಬಿ) ಸುಳಿವು ಸಿಕ್ಕಿತ್ತು.

ಪಾಕಿಸ್ತಾನದ ಟಿ–20 ತಂಡದ ನಾಯಕತ್ವವನ್ನು ಭಾನುವಾರ ಸ್ವಇಚ್ಛೆಯಿಂದ ತೊರೆಯುತ್ತಿರುವುದಾಗಿ ಪಾಕಿಸ್ತಾನ ಹಾಗೂ ವಿಶ್ವದೆಲ್ಲೆಡೆ ಇರುವ ಅಭಿಮಾನಿಗಳಿಗೆ ನಾನು ಹೇಳಬಯಸುತ್ತೇನೆ’ ಎಂದು ಅಫ್ರಿದಿ ಅವರು ಟ್ವೀಟ್ ಮಾಡಿದ್ದಾರೆ.

ತಂಡದಲ್ಲಿ ಆಟಗಾರನಾಗಿ ಮುಂದುವರೆಯುವುದಾಗಿ ಅಫ್ರಿದಿ ಸ್ಪಷ್ಟಪಡಿಸಿದ್ದಾರೆ. 2010ರಲ್ಲಿ ಟೆಸ್ಟ್‌ಗೆ ನಿವೃತ್ತಿ ಘೋಷಿಸುವ ಮುನ್ನ ಆಲ್‌ರೌಂಡರ್ ಆಟಗಾರ ಅಫ್ರಿದಿ, 27 ಟೆಸ್ಟ್‌ ಪಂದ್ಯಗಳನ್ನಾಡಿದ್ದರು. ಒಟ್ಟು 1716 ರನ್‌ ಹಾಗೂ 27 ವಿಕೆಟ್‌ ಪಡೆದಿದ್ದರು. ಈವರೆಗೂ 389 ಏಕದಿನ ಪಂದ್ಯಗಳಿಂದ 8064 ರನ್‌ಗಳಿಸಿರುವ ಅವರು, 395 ವಿಕೆಟ್ ಉರುಳಿಸಿದ್ದಾರೆ.

ಒಟ್ಟು 98 ಟಿ–20 ಪಂದ್ಯಗಳಲ್ಲಿ 1405 ರನ್‌ ಹಾಗೂ 97 ವಿಕೆಟ್ ಸಾಧನೆ ಮಾಡಿದ್ದಾರೆ. ಪಾಕಿಸ್ತಾನ ತಂಡವನ್ನು ಮುನ್ನಡೆಸಿದ್ದಕ್ಕೆ ನನಗೆ ಬಹಳ ಹೆಮ್ಮೆಯಿದೆ. ಈ ಅವಕಾಶ ಮಾಡಿಕೊಟ್ಟ ಪಿಸಿಬಿ ಮತ್ತು ಇದರ ಅಧ್ಯಕ್ಷ ಶಹರಿಯಾರ್ ಖಾನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಟೆಸ್ಟ್ ಮತ್ತು ಏಕದಿನ ಪಂದ್ಯಕ್ಕೆ ಗುಡ್ ಬೈ ಹೇಳಿದ್ದ ಅಫ್ರಿದಿ ವಿಶ್ವಕಪ್ ಟಿ20ಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ನನ್ನ ಕೊನೆಯ ಪಂದ್ಯವಾಗಲಿದೆ ಎಂದು ಹೇಳಿದ್ದರು. ಆದರೆ ನಂತರ ಪಾಕಿಸ್ತಾನಕ್ಕೆ ತೆರಳಿದ ಮೇಲೆ ನನ್ನ ನಿವೃತ್ತಿ ನಿರ್ಧಾರವನ್ನು ಪರಿಶೀಲಿಸುವುದಾಗಿ ತಿಳಿಸಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video