ವಿರಾಟ್ ಕೊಹ್ಲಿ (ಸಂಗ್ರಹ ಚಿತ್ರ) 
ಕ್ರಿಕೆಟ್

ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಸರಣಿ ಶ್ರೇಷ್ಠ

ಸರಣಿಯುದ್ದಕ್ಕೂ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನದ ಮೂಲಕ ಭಾರತ ತಂಡವನ್ನು ಸೆಮಿಫೈನಲ್ ವರೆಗೂ ಮುನ್ನಡೆಸಿದ್ದ ವಿರಾಟ್..

ಕೋಲ್ಕತಾ: ಸರಣಿಯುದ್ದಕ್ಕೂ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನದ ಮೂಲಕ ಭಾರತ ತಂಡವನ್ನು ಸೆಮಿಫೈನಲ್ ವರೆಗೂ ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ನ ಸರಣಿ ಶ್ರೇಷ್ಠ  ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಟೂರ್ನಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ದಾಖಲೆಯ 136.50 ಸರಾಸರಿಯಲ್ಲಿ ಒಟ್ಟು 273 ರನ್ ಸಿಡಿಸಿದ್ದಾರೆ. ಅಲ್ಲದೆ ಬೌಲಿಂಗ್ ವಿಕೆಟ್ ಕೂಡ ಕಬಳಿಸಿರುವ ಕೊಹ್ಲಿ ಮೂರು  ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ರನ್ ದಾಖಲಿಸಿದ್ದಾರೆ. ಈ ಪೈಕಿ 29 ಬೌಂಡರಿಗಳಿದ್ದು, ಐದು ಭರ್ಜರಿ ಸಿಕ್ಸರ್ ಗಳು ಸೇರಿವೆ. ಟೂರ್ನಿಯ ಅತ್ಯಧಿಕ ರನ್ ಗಳಿಕೆಯ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ 2ನೇ  ಸ್ಥಾನದಲ್ಲಿದ್ದು, ಮೊದಲ ಸ್ಥಾನದಲ್ಲಿ 295 ರನ್ ಗಳಿಸಿರುವ ತಮೀಮ್ ಇಕ್ಬಾಲ್ ಇದ್ದಾರೆ.

ಆದರೆ ತಮೀಮ್ ಈ ರನ್ ಗಳನ್ನು ಸಿಡಿಸಿರುವ ಅರ್ಹತಾ ಸುತ್ತಿನ ಪಂದ್ಯಗಳಲ್ಲಾದ್ದರಿಂದ ಭಾರತದ ವಿರಾಟ್ ಕೊಹ್ಲಿ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಘೋಷಣೆ ಮಾಡಲಾಯಿತು. ನಿನ್ನೆ  ಕೋಲ್ಕತಾ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದ ಬಳಿಕ ಪ್ರಶಸ್ತಿ ವಿತರಣೆ ವೇಳೆ ಕೊಹ್ಲಿ ಸರಣಿ ಶ್ರೇಷ್ಠ ಎಂದು ಘೋಷಿಸಲಾಯಿತು. ಆದರೆ ಕೊಹ್ಲಿ ದೆಹಲಿಯಲ್ಲಿದ್ದು, ಅವರ  ಬದಲಿಗೆ ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಮತ್ತು ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರು ಪ್ರಶಸ್ತಿ ಸ್ವೀಕರಿಸಿದರು.

2014ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸರಣಿಯಲ್ಲಿಯೂ 319 ರನ್ ಗಳಿಸಿ ತಂಡವನ್ನು ಫೈನಲ್ ಪ್ರವೇಶಿಸುವಂತೆ ಮಾಡಿದ್ದ ಕೊಹ್ಲಿ ಆ ಸರಣಿಯಲ್ಲಿಯೂ ಸರಣಿಶ್ರೇಷ್ಠರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!