ರಾಹುಲ್ ಜೋಹ್ರಿ 
ಕ್ರಿಕೆಟ್

ಲೋಧಾ ಸಮಿತಿ ಪರಿಣಾಮ: ಬಿಸಿಸಿಐ ಮೊದಲ ಸಿಇಒ ಆಗಿ ರಾಹುಲ್ ಜೋಹ್ರಿ ನೇಮಕ

ಮೂವರು ಸದಸ್ಯರನ್ನೊಳಗೊಂಡ ಲೋಧಾ ಸಮಿತಿ ಶಿಫಾರಸಿನಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ...

ನವದೆಹಲಿ: ಮೂವರು ಸದಸ್ಯರನ್ನೊಳಗೊಂಡ ಲೋಧಾ ಸಮಿತಿ ಶಿಫಾರಸಿನಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಮೊದಲ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ(ಸಿಇಒ)ಯಾಗಿ ರಾಹುಲ್ ಜೋಹ್ರಿ ಅವರನ್ನು ಬುಧವಾರ ನೇಮಕ ಮಾಡಿಕೊಳ್ಳಲಾಗಿದೆ.
ರಾಹುಲ್ ಜೋಹ್ರಿ ನೇಮಕಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಇಂದು ಪ್ರಕಟಣೆ ನೀಡಿದ್ದು, ಜೂನ್ 1ರಿಂದ ಅವರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ತಿಳಿಸಿದೆ.
ಡಿಸ್ಕವರಿ ನೆಟ್​ವರ್ಕ್​ನ ಏಷ್ಯಾ ಪೆಸಿಫಿಕ್ ಕಾರ್ಯನಿರ್ವಹಣಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ರಾಹುಲ್ ಜೋಹ್ರಿ ಅವರು ದಕ್ಷಿಣ ಏಷ್ಯಾದ ಪ್ರಧಾನ ವ್ಯವಸ್ಥಾಪಕರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಜೂನ್ 1ರಿಂದ ಅವರು ಬಿಸಿಸಿಐ ಸಿಇಒ ಆಗಿ ಮುಂಬೈ ಕಚೇರಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್, ರಾಹುಲ್ ಅವರಲ್ಲಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಅವರು ಒಪ್ಪಿಕೊಂಡು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಆಡಳಿತದಲ್ಲಿ ಪಾರದರ್ಶಕತೆ ತರಲಿಕ್ಕಾಗಿ ಅನುಭವಿ ಅಧಿಕಾರಿಯೊಬ್ಬರ ಅಗತ್ಯತೆ ಬಿಸಿಸಿಐಗೆ ಇತ್ತು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT