ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಗುಡ್ ಬೈ ಹೇಳಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮುಖ್ಯಸ್ಥರಾಗುವ ತವಕದಲ್ಲಿದ್ದಾರಂತೆ ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್. ಹೀಗೊಂದು ಸುದ್ದಿ ಕ್ರಿಕೆಟ್ ವಲಯದಲ್ಲಿ ಹರಿದಾಡುತ್ತಿದೆ.
ಐಸಿಸಿ ಮುಖ್ಯಸ್ಥರಾಗುವವರು ಸ್ವತಂತ್ರರಾಗಿರಬೇಕು. ಯಾವುದೇ ದೇಶದ ಕ್ರಿಕೆಟ್ ಮಂಡಳಿಯನ್ನು ಪ್ರತಿನಿಧಿಸಬಾರದು ಎಂದು ಐಸಿಸಿ ಹೊಸ ನಿಯಮ ಮಾಡಲು ಮುಂದಾಗಿದ್ದು, ಈ ಕುರಿತು ಮಂಡಳಿಯ ಸಭೆಯಲ್ಲಿಯೂ ಚರ್ಚೆ ನಡೆದಿವೆ.
ಇದೇ ವರ್ಷದ ಜೂನ್ ನಲ್ಲಿ ನಡೆಯುವ ಐಸಿಸಿ ವಾರ್ಷಿಕ ಸಭೆಯಲ್ಲಿ ಹೊಸ ನಿಯಮದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.