ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಕೆಲವು ನಿರ್ಧಿಷ್ಟ ಪದಾಧಿಕಾರಿಗಳನ್ನು ಕೈಬಿಟ್ಟು ವೀಕ್ಷಕರನ್ನಾಗಿ ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಜಿಕೆ ಪಿಳ್ಳೈ ಅವರನ್ನು ನೇಮಿಸಬೇಕು ಎಂಬ ಲೋಧ ಸಮಿತಿಯ ಶಿಫಾರಸ್ಸಿಗೆ ವಿರೋಧ ವ್ಯಕ್ತಪಡಿಸಿರುವ ಬಿಸಿಸಿಐ ಸುಪ್ರೀಂಕೋರ್ಟ್ ತೀರ್ಪಿನ ನಂತರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದೆ.
ವಿಶೇಷ ಸಾಮಾನ್ಯ ಸಭೆ ನಡೆಸಿದ ಬಿಸಿಸಿಐ ಲೋಧ ಸಮಿತಿಯ ಶಿಫಾರಸ್ಸು ಕುರಿತಂತೆ ಡಿಸೆಂಬರ್ 5 ರಂದು ಸುಪ್ರೀಂಕೋರ್ಟ್ ತೀರ್ಪು ನೀಡಲಿದ್ದು ತೀರ್ಪಿನ ಬಳಿಕ ಲೋಧ ಸಮಿತಿಯ ಶಿಫಾರಸ್ಸನ್ನು ಅಂಗೀಕರಿಸುವ ನಿರ್ಧಾರ ಕೈಗೊಳ್ಳುವುದಾಗಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಇನ್ನು ಸುಪ್ರೀಂಕೋರ್ಟ್ ತೀರ್ಪು ತಮ್ಮ ಪರವಾಗಿ ಬರದೆ ಇದ್ದ ಪಕ್ಷದಲ್ಲಿ ಫ್ಲಾನ್ ಬಿಯನ್ನು ರೆಡಿ ಮಾಡಿಟ್ಟುಕೊಳ್ಳುವಂತೆ ಬಿಸಿಸಿಐಗೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.