ಬ್ಯಾಂಕಾಕ್: ಮಹಿಳೆಯ ಟಿ20 ಏಷ್ಯಾ ಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ವೈರಿ ಪಾಕಿಸ್ತಾನವನ್ನು ಮಣಿಸಿ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಏಷ್ಯನ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಗ್ರೌಂಡ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತೀಯ ಮಹಿಳೆಯರು ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು.
122 ರನ್ ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ನಿಗದಿತ ಓವರ್ ನಲ್ಲಿ 104 ರನ್ ಮಾತ್ರ ಗಳಿಸಲು ಶಕ್ತವಾಗಿದ್ದು 17 ರನ್ ಗಳಿಂದ ಭಾರತಕ್ಕೆ ಶರಣಾಯಿತು.
ಭಾರತ ಪರ ಮಿಥಾಲಿ ರಾಜ್ 65 ಎಸೆತಗಳಲ್ಲಿ 73 ರನ್ ಗಳಿಸಿದ್ದು ತಂಡ 121 ರನ್ ಗಳಿಸಲು ಸಾಧ್ಯವಾಯಿತು. ಸರಣಿ ಉದ್ದಕ್ಕೂ ಭರ್ಜರಿ ಪ್ರದರ್ಶನ ನೀಡಿದ ಮಿಥಾಲಿ ರಾಜ್ ಸರಣಿ ಶ್ರೇಷ್ಠ ಮತ್ತು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.