ಅಜಿಂಕ್ಯಾ ರಹಾನೆ 
ಕ್ರಿಕೆಟ್

4ನೇ ಟೆಸ್ಟ್‌: ಗಾಯಾಳು ರಹಾನೆ ಔಟ್, ಮನಿಶ್ ಪಾಂಡೆ ಇನ್

ಅಜಿಂಕ್ಯಾ ರಹಾನೆ ಅವರು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಹಾಗೂ ಐದನೇ ಟೆಸ್ಟ್ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು...

ಮುಂಬೈ: ಅಜಿಂಕ್ಯಾ ರಹಾನೆ ಅವರು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಹಾಗೂ ಐದನೇ ಟೆಸ್ಟ್ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಬುಧವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಘೋಷಿಸಿದೆ.
ಗಾಯಾದ ಸಮಸ್ಯೆಯಿಂದ ಬಳಲುತ್ತಿರುವ ಅಜಿಂಕ್ಯಾ ಅವರಿಗೆ ಎರಡು ಪಂದ್ಯಗಳಿಂದ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನಕ್ಕೆ ಕರ್ನಾಟಕದ ಬ್ಯಾಟ್ಸ್ ಮನ್ ಮನಿಶ್ ಪಾಂಡೆ ಅವರಿಗೆ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ತರಬೇತಿ ವೇಳೆ ರಹಾನೆ ಅವರ ಬಲಗೈ ಬೆರಳಿಗೆ ಗಾಯವಾಗಿದ್ದು, ಅವರು ಮುಂದಿನ ಪಂದ್ಯಗಳು ಆಡುವುದಿಲ್ಲ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ವೇಳೆ ಭಾರತ ಟೆಸ್ಟ್‌ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಅವರು ಮೊಣಕಾಲು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಶಾರ್ದುಲ್ ತಾಕೂರ್ ಗೆ ಸ್ಥಾನ ನೀಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ಮೊಹಾಲಿಯಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ಮೊಹಮ್ಮದ್ ಶಮಿಗೆ ಮೊಣಕಾಲು ನೋವು ಕಾಣಿಸಿಕೊಂಡಿತ್ತು.
ಗುರುವಾರದಿಂದ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಗೆ ತೀವ್ರ ಹಿನ್ನಡೆ: ಇರಾನ್ ವಿರುದ್ಧ ಯುದ್ಧ ವಿರೋಧಿಸಿ ಅಮೆರಿಕದ ಭಯೋತ್ಪಾದನಾ ನಿಗ್ರಹ ಮುಖ್ಯಸ್ಥ ರಾಜೀನಾಮೆ!

Iran War: 'ಮಾತುಕತೆ ಪ್ರಶ್ನೆಯೇ ಇಲ್ಲ.. ಅಮೆರಿಕ, ಇಸ್ರೇಲ್ ಶರಣಾಗಲೇಬೇಕು..': Mojtaba Khamenei ಎಚ್ಚರಿಕೆ

KD ಚಿತ್ರ ವಿವಾದ: 'ಅನುವಾದ ಮಾತ್ರ ನನ್ನದು.. ಹಾಡು ಪ್ರೇಮ್ ಅವರದ್ದು..' 'ಇದೊಂದರಿಂದ ಅವಮಾನವಾಗುತ್ತಿದೆ'..: ಗೀತ ರಚನೆಕಾರ ಶಾಕಿಂಗ್ ಹೇಳಿಕೆ

ಯಾರಾಗಲಿದ್ದಾರೆ ಭಾರತದ ಮುಂದಿನ CDS?: ಇಲ್ಲಿದೆ ಮಾಹಿತಿ

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ?: ಸಂತ್ರಸ್ತೆಯ ಮಗಳ ಮೇಲೂ ಕಣ್ಣು, ಆಡಿಯೋ-ವಿಡಿಯೋ ವೈರಲ್..! ಅಮಾನತು

SCROLL FOR NEXT