ವೀರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ 
ಕ್ರಿಕೆಟ್

200 ಮುಖಬೆಲೆಯ ನೋಟಿನ ಮೇಲೆ ಕೊಹ್ಲಿ ಚಿತ್ರ! ವೀರೇಂದ್ರ ಸೆಹ್ವಾಗ್ ಟ್ವೀಟ್

500 ಮತ್ತು 1000 ಮುಖಬೆಲೆಯ ನೋಟಿನ್ನು ನಿಷೇಧಿಸಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇದೀಗ ಹೊಸದಾಗಿ 2000 ಮುಖಬೆಲೆಯ ನೋಟುಗಳನ್ನು...

ನವದೆಹಲಿ: 500 ಮತ್ತು 1000 ಮುಖಬೆಲೆಯ ನೋಟಿನ್ನು ನಿಷೇಧಿಸಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇದೀಗ ಹೊಸದಾಗಿ 2000 ಮುಖಬೆಲೆಯ ನೋಟುಗಳನ್ನು ಜಾರಿಗೆ ತಂದಿದ್ದು, 200 ಮುಖಬೆಲೆಯ ನೋಟನ್ನು ಜಾರಿಗೆ ತಂದು ಅದರ ಮೇಲೆ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಭಾವಚಿತ್ರ ಅಚ್ಚುಮಾಡಿ ಅನ್ನುವಂತ ಟ್ವೀಟ್ ಅನ್ನು ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಮಾಡಿದ್ದಾರೆ. 
ಟೀಂ ಇಂಡಿಯಾ ಪರ ಆಡುವಾಗ ಸ್ಫೋಟಕ ಹೊಡೆತಗಳಿಗೆ ಹೆಸರುವಾಸಿಯಾಗಿದ್ದ ವೀರೇಂದ್ರ ಸೆಹ್ವಾಗ್ ಇದೀಗ ಟ್ವೀಟರ್ ನಲ್ಲಿ ತಮ್ಮ ಹಾಸ್ಯ ಪ್ರಜ್ಞೆ ಟ್ವೀಟ್ ಗಳನ್ನು ಮಾಡುವ ಮೂಲಕ ಜನಮಾನಸದಲ್ಲಿ ಖ್ಯಾತಿಗಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೂರನೇ ಬಾರಿಗೆ 200 ಗಡಿ ದಾಡಿದ್ದು ಇದಕ್ಕೆ ಅಭಿನಂದನೆ ಸಲ್ಲಿಸಲು ವೀರು 200 ನೋಟುಗಳ ಐಡಿಯಾವನ್ನು ನೀಡಿದ್ದಾರೆ. 
ವೀರು ತಮ್ಮ ಟ್ವೀಟರ್ ನಲ್ಲಿ 200 ಮುಖಬೆಲೆಯ ನೋಟಿನ ಮೇಲೆ ವಿರಾಟ್ ಕೊಹ್ಲಿ ಬ್ಯಾಟನ್ನು ಮೇಲಕ್ಕೆ ಎತ್ತಿ ಸಂಭ್ರಮಿಸುತ್ತಿರುವ ಚಿತ್ರವನ್ನು ಹಾಕಿ ಅದರ ಕೆಳಗೆ ತಮ್ಮ ಸಲಹೆಯನ್ನು ನೀಡಿದ್ದಾರೆ. 
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 340 ಎಸೆತಗಳಲ್ಲಿ 235 ರನ್ ಸಿಡಿಸಿದ್ದಾರೆ. 25 ಬೌಂಡರಿಗಳನ್ನು ಸಿಡಿಸಿರುವ ಅವರು 1 ಸಿಕ್ಸರ್ ಹೊಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!