ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಅನುರಾಗ್ ಠಾಕೂರ್‌ಗೆ ಸಂಕಷ್ಟ ಎದುರಾಗಿದೆ.
ಲೋಧಾ ಸಮಿತಿ ಶಿಫಾರಸು ಅನುಷ್ಠಾನದ ಬಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಧ್ಯಕ್ಷ ಶಶಾಂಕ್ ಮನೋಹರ್ ಜತೆ ಚರ್ಚಿಸುವಂತೆ ಸುಪ್ರೀಂಕೋರ್ಟ್ ಅನುರಾಗ್ ಠಾಕೂರ್‌ಗೆ ಆದೇಶಿಸಿತ್ತು. ಸುಪ್ರೀಂ ಆದೇಶವನ್ನು ಪಾಲಿಸಿರುವುದಾಗಿ ಠಾಕೂರ್ ಪ್ರಮಾಣ ಪತ್ರವನ್ನು ಕೋರ್ಟ್ ಗೆ ಸಲ್ಲಿಸಿದ್ದು ಒಂದು ವೇಳೆ ಅವರು ಆದೇಶವನ್ನು ಪಾಲಿಸದೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದು ಸಾಬೀತಾದರೆ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ.
ಲೋಧಾ ಸಮಿತಿಯ ಪ್ರಮುಖ ಶಿಫಾರಸುಗಳಾದ ಹಿರಿಯ ಅಧಿಕಾರಗಳ ವಜಾ ಸೇರಿದಂತೆ ಇನ್ನಿತರ ಮಹತ್ವದ ಅಂಶಗಳನ್ನು ಶಶಾಂಕ್ ಮನೋಹರ್ ಜತೆ ಚರ್ಚಿಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.
ಅನುರಾಗ್ ಠಾಕೂರ್ ಶಶಾಂಕ್ ಮನೋಹರ್ ಜತೆ ಚರ್ಚಿಸದೆ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದ್ದು ಇದು ನಿಜವಾದರೆ ಅನುರಾಗ್ ಠಾಕೂರ್ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಇನ್ನು ಠಾಕೂರ್ ಅವರು ಜೈಲು ಶಿಕ್ಷೆಗೆ ಗುರಿಯಾದರೆ ಅದರಿಂದ ಪಾರಾಗಲು ಕ್ಷಮೆ ಕೋರುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.