ಕ್ರಿಕೆಟ್

ಟೆಸ್ಟ್‌ನಲ್ಲಿ ತ್ರಿಶತಕ ಸಿಡಿಸಿದ ಮೊದಲ ಕನ್ನಡಿಗ ಕರುಣ್ ನಾಯರ್

Srinivasamurthy VN

ಮುಂಬೈ: ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ತ್ರಿಶತಕ ಸಾಧನೆ ಮಾಡಿದ್ದಾರೆ.

ಚೆನ್ನೈನ ಚಿಪಾಕ್ ನಲ್ಲಿರುವ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಚೊಚ್ಚಲ ತ್ರಿಶತಕ ಸಾಧನೆ ಮಾಡಿದ್ದು, ಕನ್ನಡಿಗರ ಮಟ್ಟಿಗೆ ತ್ರಿಶತಕ ಸಿಡಿಸಿದ ಮೊದಲ  ಆಟಗಾರ ಎಂಬ ಖ್ಯಾತಿಗೆ ಕರುಣ್ ನಾಯರ್ ಪಾತ್ರರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ ನಾಯರ್ ಒಟ್ಟು 381 ಎಸೆತಗಳಲ್ಲಿ 303 ರನ್ ಸಿಡಿಸುವ ಮೂಲಕ ಈ ಸಾಧನೆ ಗೈದಿದ್ದಾರೆ.

ಟೀಂ ಇಂಡಿಯಾದ ಗೋಡೆ ಖ್ಯಾತಿಯ ಕನ್ನಡಿಗ ರಾಹುಲ್ ದ್ರಾವಿಡ್ 2004ರಲ್ಲಿ ಪಾಕಿಸ್ತಾನ ವಿರುದ್ಧ ರಾವಲ್ ಪಿಂಡಿಯಲ್ಲಿ ನಡೆದ ಪಂದ್ಯದಲ್ಲಿ ಗಳಿಸಿದ್ದ 270 ರನ್ ಗಳು ವೈಯಕ್ತಿಕ ಗರಿಷ್ಠ ಮೊತ್ತವಾಗಿತ್ತು. ಆದರೆ ಈ ಸಾಧನೆಯನ್ನು  ಇಂದು ಕನ್ನಡಿದ ಕರುಣ್ ನಾಯರ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಎರಡನೇ ಪಂದ್ಯದಲ್ಲಿ ಮೆಟ್ಟಿನಿಂತಿದ್ದಾರೆ. ನಾಯರ್ ಉತ್ತಮ ಸಾಥ್ ನೀಡುತ್ತಿರುವ ರವೀಂದ್ರ ಜಡೇಜಾ ಕೂಡ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು.

ಇತ್ತೀಚಿನ ವರದಿಗಳು ಬಂದಾಗ ಭಾರತ ತಂಡ 6 ವಿಕೆಟ್ ನಷ್ಟಕ್ಕೆ 751ರನ್ ಗಳಿಸಿದೆ.

SCROLL FOR NEXT