ಇಂಗ್ಲೆಂಡ್ ವಿರುದ್ಧ ಇನ್ನಿಂಗ್ ಮತ್ತು ೭೫ ರನ್ ಗಳಿಂದ ಐದನೇ ಟೆಸ್ಟ್ ಪಂದ್ಯ ಗೆದ್ದ ಭಾರತ 
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್: ಜಡೇಜಾಗೆ 7 ವಿಕೆಟ್; ಭಾರತಕ್ಕೆ ಇನ್ನಿಂಗ್ ಮತ್ತು 75 ರನ್ ಗೆಲುವು

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಐದನೇ ಮತ್ತು ಕೊನೆಯ ಪಂದ್ಯವನ್ನು ಇನ್ನಿಂಗ್ ಮತ್ತು ೭೫ ರನ್ ಗಳಿಂದ ಗೆದ್ದ ಭಾರತ, ಸರಣಿಯನ್ನು ೪-೦ ಅಂತರದಿಂದ ಗೆದ್ದಿದೆ.

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಐದನೇ ಮತ್ತು ಕೊನೆಯ ಪಂದ್ಯವನ್ನು ಇನ್ನಿಂಗ್ ಮತ್ತು ೭೫ ರನ್ ಗಳಿಂದ ಗೆದ್ದ ಭಾರತ, ಸರಣಿಯನ್ನು ೪-೦ ಅಂತರದಿಂದ ಗೆದ್ದಿದೆ. 
ಮೊದಲ ಇನ್ನಿಂಗ್ಸ್ ನಲ್ಲಿ ೨೮೨ ರನ್ ಗಳ ಹಿನ್ನಡೆ ಅನುಭವಿಸಿದ್ದ ಇಂಗ್ಲೆಂಡ್ ಇಂದು ಎರಡನೇ ಇನ್ನಿಂಗ್ ಬ್ಯಾಟಿಂಗ್ ಮುಂದುವರೆಸಿ, ನಿಯಮಿತ ಸಮಯದಲ್ಲಿ ವಿಕೆಟ್ ಕಳೆದುಕೊಂಡು ಭಾರತದ ಗೆಲುವನ್ನು ಸುಲಭವಾಗಿಸಿದೆ. 
ಭಾರತದ ಕಡೆ ರವೀಂದ್ರ ಜಡೇಜಾ ೭ ವಿಕೆಟ್ ಕಬಳಿಸಿ, ಅಮೋಘ ಬೌಲಿಂಗ್ ಮಾಡಿದ್ದರೆ, ಉಮೇಶ್ ಯಾದವ್, ಇಶಾಂತ್ ಶರ್ಮ ಮತ್ತು ಅಮಿತ್ ಮಿಶ್ರಾ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 
ದಿನದಾಟ ಮುಗಿಯಲು ಇನ್ನು ಕೇವಲ ೭ ಓವರ್ ಗಳು ಉಳಿದಿದ್ದಾಗ, ಜಡೇಜಾ ಬೌಲಿಂಗ್ ನಲ್ಲಿ, ಕರುಣ್ ನಾಯರ್ ಹಿಡಿದ ಕ್ಯಾಚ್ ನಿಂದ ಕೊನೆಯ ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ ಭಾರತೀಯ ಆಟಗಾರರ ಸಂಭ್ರಮಕ್ಕೆ ಕಾರಣರಾಗಿದ್ದಾರೆ. 
ನೆನ್ನೆ ಕನ್ನಡಿಗ ಕರುಣ್ ನಾಯರ್ ತ್ರಿಶತಕ ಗಳಿಸಿ, ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ೭೫೯ ರನ್ ಗಳ ದೊಡ್ಡ ಮೊತ್ತವನ್ನು ಪೇರಿಸಲು ಸಹಕರಿಸಿದ್ದರು. ಮತ್ತೊಬ್ಬ ಕನ್ನಡಿಗ ಕೆ ಎಲ್ ರಾಹುಲ್ ಕೂಡ ೧೯೯ ರನ್ ಗಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. 
ಕರುಣ್ ನಾಯರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!