ಆರ್ ಅಶ್ವಿನ್, ರವೀಂದ್ರ ಜಡೇಜಾ 
ಕ್ರಿಕೆಟ್

ಐಸಿಸಿ ಬೌಲಿಂಗ್ ರ್ಯಾಂಕಿಂಗ್: ಅಶ್ವಿನ್ ನಂ.1, ಜಡೇಜಾ ನಂ.2

ಟೀಂ ಇಂಡಿಯಾದ ಕೇರಂ ಸ್ಪಿನ್ ಮಾಂತ್ರಿಕ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಕ್ರಮವಾಗಿ ಟಾಪ್ 1 ಟಾಪ್ 2 ಸ್ಥಾನಗಳನ್ನು ಪಡೆದಿದ್ದು ಭಾರತದ ಮಟ್ಟಿಗೆ ಇದು ಅಪರೂಪದ...

ಟೀಂ ಇಂಡಿಯಾದ ಕೇರಂ ಸ್ಪಿನ್ ಮಾಂತ್ರಿಕ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಕ್ರಮವಾಗಿ ಟಾಪ್ 1 ಟಾಪ್ 2 ಸ್ಥಾನಗಳನ್ನು ಪಡೆದಿದ್ದು ಭಾರತದ ಮಟ್ಟಿಗೆ ಇದು ಅಪರೂಪದ ಸಾಧನೆಯಾಗಿದೆ.

ಟೀಂ ಇಂಡಿಯಾ ಟೆಸ್ಟ್ ಸರಣಿಗಳಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಸರಣಿ ಗೆಲುವಿಗೆ ಕಾರಣವಾಗಿರುವ ಆರ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು ಇದೀಗ ಚೆನ್ನೈ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ರವೀಂದ್ರ ಜಡೇಜಾ ಪಟ್ಟಿಯಲ್ಲಿ 2 ಸ್ಥಾನಕ್ಕೇರಿದ್ದಾರೆ.

1974ರಲ್ಲಿ ಭಾರತದ ಇಬ್ಬರು ಬೌಲರ್ ಗಳಾದ ಬಿಶನ್ ಬೇಡಿ ಮತ್ತು ಭಾಗವತ್ ಚಂದ್ರಶೇಖರ್ ಅವರು ಬೌಲಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು. ಇವರನ್ನು ಹೊರತು ಪಡಿಸಿ ಇನ್ಯಾವ ಆಟಗಾರರು ಕ್ರಮವಾಗಿ ಟಾಪ್ ಸ್ಥಾನಗಳನ್ನು ಅಲಂಕರಿಸಿರಲಿಲ್ಲ. ಆದರೆ ಇದೀಗ ಅಶ್ವಿನ್ ಮತ್ತು ಜಡೇಜಾ ಈಗ ಅಂತ ಅದ್ಭುತ ಸಾಧನೆ ಮಾಡಿದ್ದಾರೆ.

ಇಂಗ್ಲೇಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಶ್ವಿನ್ 30.25ರ ಸರಾಸರಿಯಲ್ಲಿ 28 ವಿಕೆಟ್ ಗಳನ್ನು ಪಡೆದಿದ್ದರೆ, ಜಡೇಜಾ 25.84ರ ಸರಾಸರಿಯಲ್ಲಿ 26 ವಿಕೆಟ್ ಗಳನ್ನು ಪಡೆದಿದ್ದಾರೆ. ಒಟ್ಟಾರೆ ಸರಣಿಯಲ್ಲಿ ಇಂಗ್ಲೆಂಡ್ ನ 93 ವಿಕೆಟ್ ಗಳು ಹುರುಳಿದ್ದರೆ ಅದರಲ್ಲಿ 54 ವಿಕೆಟ್ ಗಳನ್ನು ಈ ಇಬ್ಬರು ಆಟಗಾರರೇ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ