ಕ್ರಿಕೆಟ್

ಸ್ಮಿತ್‌ರನ್ನು ಹಿಂದಿಕ್ಕಿ ಕ್ರಿಕೆಟ್ ಆಸ್ಟ್ರೇಲಿಯಾ ಏಕದಿನ ತಂಡಕ್ಕೆ ನಾಯಕನಾದ ವಿರಾಟ್

Vishwanath S
ಸಿಡ್ನಿ: ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಕ್ರಿಕೆಟ್ ಆಸ್ಟ್ರೇಲಿಯಾ(ಸಿಎ) ವರ್ಷದ ಟೆಸ್ಟ್ ತಂಡಕ್ಕೆ ನಾಯಕನಾಗಿ ಆಯ್ಕೆ ಮಾಡಿದ್ದು ಇದೀಗ ಏಕದಿನ ತಂಡಕ್ಕೂ ಕೊಹ್ಲಿಯನ್ನೇ ನಾಯಕನನ್ನಾಗಿ ಆಯ್ಕೆ ಮಾಡಿದೆ. 
ಉತ್ತಮ ಪ್ರದರ್ಶನ ನೀಡುತ್ತಿರುವ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ರನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ ಏಕದಿನ ಮತ್ತು ಟೆಸ್ಟ್ ತಂಡಗಳ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇನ್ನು ಏಕದಿನ ತಂಡದಲ್ಲಿ ಭಾರತದ ಯುವ ಯಾರ್ಕರ್ ಪ್ರವೀಣ ಜಸ್ಪ್ರೀತ್ ಬೂಮ್ರಾ ಸಹ ಸ್ಥಾನಪಡೆದಿದ್ದಾರೆ. 
2016ರಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 10 ಪಂದ್ಯಗಳನ್ನು ಆಡಿದ್ದಾರೆ. ನಿಗದಿತ 50 ಓವರ್ ಗಳ ಫಾರ್ಮೆಟ್ ನಲ್ಲಿ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಕ್ಷಮತೆ ಹೊಂದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ. 
ಆಡಿರುವ 10 ಪಂದ್ಯಗಳ ಪೈಕಿ 8 ಪಂದ್ಯಗಳಲ್ಲಿ 45ಕ್ಕೂ ಹೆಚ್ಚು ರನ್ ಸಿಡಿಸಿದ್ದಾರೆ. ಜನವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಶತಕಗಳನ್ನು ಸಿಡಿಸಿದ್ದು ಅಜೇಯ 154 ರನ್ ಗಳಿಸಿದ್ದರು. ಇನ್ನು ನ್ಯೂಜಿಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಒಟ್ಟಾರೆ 289 ರನ್ ಗಳಿಸಿದ್ದಾರೆ ಸಿಎ ತನ್ನ ಪ್ರಕಟಣೆಯಲ್ಲಿ ಹೇಳಿದೆ.
SCROLL FOR NEXT