ಕೈಫ್ ಸೂರ್ಯ ನಮಸ್ಕಾರದ ಭಂಗಿಗಳು 
ಕ್ರಿಕೆಟ್

ವೈರಲ್ ಆಯ್ತು ಮೊಹಮದ್ ಕೈಫ್ ಸೂರ್ಯ ನಮಸ್ಕಾರ: ಟ್ವಿಟ್ಟರ್ ಟ್ರೋಲ್ ಗೆ ಗರಂ ಆದ ಕ್ರಿಕೆಟಿಗ

ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮದ್ ಶಮ್ ಪತ್ನಿ ಡ್ರೆಸ್ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದ ನಂತರ ಇದೀಗ ಮತ್ತೊಬ್ಬ ಕ್ರಿಕೆಟಿಗ ಮೊಹಮದ್ ಕೈಫ್ ...

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮದ್ ಶಮ್ ಪತ್ನಿ ಡ್ರೆಸ್ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದ ನಂತರ ಇದೀಗ ಮತ್ತೊಬ್ಬ ಕ್ರಿಕೆಟಿಗ ಮೊಹಮದ್ ಕೈಫ್ ಸಮಸ್ಯೆಗೆ ಸಿಲುಕಿದ್ದಾರೆ.

ಸೂರ್ಯ ನಮಸ್ಕಾರದ ವಿವಿಧ ಭಂಗಿಗಳ ಫೋಟೋ ಅಪ್ ಲೋಡ್ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಸೂರ್ಯ ನಮಸ್ಕಾರ ಮಾಡುವುದರಿಂದ ದೇಹಕ್ಕೆ ಪೂರ್ಣಪ್ರಮಾಣದ ವ್ಯಾಯಾಮ ಸಿಗುತ್ತದೆ. ಸೂರ್ಯ ನಮಸ್ಕಾರ ಮಾಡುವುದರಿಂದ ಯಾವುದೇ ಉಪಕರಣಗಳ ಸಹಾಯವಿಲ್ಲದೇ ದೇಹವನ್ನು ದಂಡಿಸಬಹುದು ಎಂದು ಕೈಫ್ ಟ್ವೀಟ್ ಮಾಡಿದ್ದಾರೆ.

ಇನ್ನೂ ಮೊಹಮದ್ ಕೈಫ್ ಟ್ವಿಟ್ಟರ್ ಪೋಸ್ಟ್ ಗೆ ಹಲವರು ರಿಟ್ವೀಟ್ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇಸ್ಲಾಂ ನಲ್ಲಿ ಸೂರ್ಯ ನಮಸ್ಕಾರವನ್ನು ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ. ಹೀಗಿದ್ದರು ಯಾಕೆ ಈ ವಿವಾದಾತ್ಮಕ ಪೋಸ್ಟ್ ಗಳನ್ನು ಹಾಕಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ತಮ್ಮ ಪೋಸ್ಟ್ ಗೆ ಅಸಮಾಧಾನ ವ್ಯಕ್ತ  ಪಡಿಸಿರುವವರಿಗೆ ದಿಟ್ಟ ಉತ್ತರ ನೀಡಿರುವ ಮೊಹಮದ್ ಕೈಫ್, ಅಲ್ಲಾ ನನ್ನ ಹೃದಯಲ್ಲಿದ್ದಾನೆ. ಸೂರ್ಯ ನಮಸ್ಕಾರವನ್ನು ಎಲ್ಲಾ ಧರ್ಮದವರು ಮಾಡಿ ಅದರ ಲಾಭ ಪಡೆದುಕೊಳ್ಳಬಹುದು ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್