ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ಬಿಯರ್ ಬಾಟಲಿಯೊಂದಿಗೆ ಕನ್ನಡಿಗ ಕೆಎಲ್ ರಾಹುಲ್ ಸೆಲ್ಫಿ: ಬಿಸಿಸಿಐ ಗರಂ

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ಅಭ್ಯಾಸದ ನಡುವೆ ಮೋಜು ಮಸ್ತಿ ಮಾಡುತ್ತಿದ್ದು, ಈ ವೇಳೆ ಕನ್ನಡಿಗ ಕೆಎಲ್ ರಾಹುಲ್ ಬಿಯರ್...

ಮುಂಬೈ: ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ಅಭ್ಯಾಸದ ನಡುವೆ ಮೋಜು ಮಸ್ತಿ ಮಾಡುತ್ತಿದ್ದು, ಈ ವೇಳೆ ಕನ್ನಡಿಗ ಕೆಎಲ್ ರಾಹುಲ್ ಬಿಯರ್ ಬಾಟಲಿಯೊಂದಿಗೆ ಸೆಲ್ಫಿಗೆ ಫೋಸ್ ನೀಡಿರುವುದಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗರಂ ಆಗಿದೆ.

ಟೀಂ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ತಮ್ಮ ಕೈಯಲ್ಲಿ ಬಿಯರ್ ಬಾಟಲ್ ಹಿಡಿದಿದ್ದ ಚಿತ್ರವನ್ನು ಸಾಮಾಜಿಕ ತಾಣದಲ್ಲಿ ಪ್ರಕಟಿಸಿದ್ದರು. ರಾಹುಲ್ ಜತೆ ಆಲ್ ರೌಂಡರ್ ಸ್ಟುವರ್ಟ್ ಬಿನ್ನಿ, ವೇಗಿ ಉಮೇಶ್ ಯಾದವ್ ಹಾಗೂ ತಂಡದ ಸಿಬ್ಬಂದಿ ಇದ್ದರು. ಈ ಬಗ್ಗೆ ಬಿಸಿಸಿಐ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರವಾಸದ ವೇಳೆ ಆಟಗಾರರ ವರ್ತನೆ ಆದರ್ಶವಾಗಿರಬೇಕೇ ಹೊರತು ಅಸಭ್ಯತೆ ಪ್ರದರ್ಶಿಸಬಾರದು ಎಂದು ಆಟಗಾರರ ಕಿವಿ ಹಿಂಡಿದೆ.

ಸೆಂಟ್ ಸೆವಿಸ್ ಬೀಚ್ ನಲ್ಲಿ ಆಟಗಾರರ ಬಾಂಡಿಂಗ್ ಸೆಶನ್ ಮುಗಿದ ಎರಡು ದಿನಗಳ ಬಳಿಕ ತಂಡದ ಮ್ಯಾನೇಜರ್ ರಿಯಾಜ್ ಬಾಗ್ವಾನ್ ಮೂಲಕ ಬಿಸಿಸಿಐ ಸೂಚನೆ ರವಾನಿಸಿದೆ. ಇನ್ನು ಬಿಸಿಸಿಐನಿಂದ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಕೆಎಲ್ ರಾಹುಲ್ ಪ್ರಕಟಿಸಿದ್ದ ಫೋಟೋವನ್ನು ಅಳಿಸಿ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video