ಸಚಿನ್ ಮತ್ತು ಕೋಚ್ ಆಯ್ಕೆ (ಸಂಗ್ರಹ ಚಿತ್ರ) 
ಕ್ರಿಕೆಟ್

ವಿಡಿಯೋ ಕಾನ್ಫರೆನ್ಸ್ ಮೂಲಕ ಕೋಚ್ ಆಯ್ಕೆಯಲ್ಲಿ ಪಾಲ್ಗೊಳ್ಳಲಿರುವ ಸಚಿನ್!

ಬಹು ನಿರೀಕ್ಷಿತ ಟೀಂ ಇಂಡಿಯಾ ಕೋಚ್ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ನೇತೃತ್ವದ ಸಲಹಾ ಸಮಿತಿ ಕೋಚ್ ಆಯ್ಕೆ ಅಂತಿಮಗೊಳಿಸಲಿದೆ...

ನವದೆಹಲಿ: ಬಹು ನಿರೀಕ್ಷಿತ ಟೀಂ ಇಂಡಿಯಾ ಕೋಚ್ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ನೇತೃತ್ವದ ಸಲಹಾ ಸಮಿತಿ ಕೋಚ್ ಆಯ್ಕೆ ಅಂತಿಮಗೊಳಿಸಲಿದೆ.

ಬಿಸಿಸಿಐ ಮೂಲಗಳ ಪ್ರಕಾರ ಸಲಹಾ ಸಮಿತಿಯ ಸದಸ್ಯ ಸಚಿನ್ ತೆಂಡೂಲ್ಕರ್ ವಿದೇಶಕ್ಕೆ ಹೋಗಿದ್ದು, ಅವರ ಅನುಪಸ್ಥಿತಿಯಿಂದಾಗಿ ಕೋಚ್ ನೇಮಕ ವಿಳಂಬವಾಗುವುದಿಲ್ಲ ಎಂದು  ಸ್ಪಷ್ಟಪಡಿಸಿದೆ. ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ಸಲಹಾ ಸಮಿತಿಯ ಪ್ರತಿಯೊಬ್ಬ ಸದಸ್ಯರ ಅಭಿಪ್ರಾಯವೂ ಮುಖ್ಯವಾಗಿದ್ದು, ಇದೇ ಕಾರಣಕ್ಕೆ ವಿದೇಶದಲ್ಲಿರುವ ಸಚಿನ್ ತೆಂಡೂಲ್ಕರ್ ಅವರನ್ನು  ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕಿಸಿ ಆ ಮೂಲಕ ಕೋಚ್ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

57 ಅರ್ಜಿಗಳ ಪೈಕಿ 21 ಅರ್ಜಿಗಳ ಅಂತಿಮಗೊಳಿಸಿದ ಬಿಸಿಸಿಐ

ಇನ್ನು ಟೀಂ ಇಂಡಿಯಾ ಕೋಚ್ ಹುದ್ದೆಗಾಗಿ ವ್ಯಾಪಕ ಅರ್ಜಿಗಳು ಬಂದಿದ್ದು, ಈ ಪೈಕಿ ಬಿಸಿಸಿಐ ಮಾನದಂಡಗಳಿಗೆ ಅನುಗುಣವಾಗಿರುವ 21 ಅರ್ಜಿಗಳನ್ನು ಅಂತಿಮಗೊಳಿಸಲಾಗಿದೆ ಎಂದು  ತಿಳಿದುಬಂದಿದೆ. ಈ 21 ಅರ್ಜಿಗಳನ್ನು ಸಚಿನ್, ಸೌರವ್ ಮತ್ತು ಲಕ್ಷ್ಮಣ್ ನೇತೃತ್ವದ ಸಲಹಾ ಸಮಿತಿ ಪರಿಶೀಲಿಸಿ ತನ್ನ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಮೂಲಗಳ ಪ್ರಕಾರ ಕೋಚ್ ಆಯ್ಕೆಗೆ  ಈ ಸಲಹಾ ಸಮಿತಿಗೆ ಒಂದು ವಾರಗಳ ಗಡುವು ನೀಡಲಾಗಿದ್ದು, ಮುಂಬರುವ ಜೂನ್ 22ರೊಳಗೆ ಸಮಿತಿ ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಿದೆ.

ಸಲಹಾ ಸಮಿತಿ ವಿವಿಧ ಹಂತಗಳಲ್ಲಿ ಕೋಚ್ ಆಯ್ಕೆ ಮಾಡಲಿದ್ದು, ಅನುಭವ, ಸಂದರ್ಶನ ಮತ್ತು ಅಭ್ಯರ್ಥಿಗಳ ಪ್ರಸ್ತುತಿ ಆಧಾರದ ಮೇಲೆ ಕೋಚ್ ಆಯ್ಕೆ ನಿರ್ಧಾರವಾಗಲಿದೆ ಎಂದು ಬಿಸಿಸಿಐ  ಕಾರ್ಯದರ್ಶಿ ಅಜಯ್ ಶಿರ್ಕೆ ತಿಳಿಸಿದ್ದಾರೆ.

ಟೀಂ ಇಂಡಿಯಾ ಕೋಚ್ ಆಯ್ಕೆ ಪ್ರಕ್ರಿಯೆ ಸಂಬಂಧ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಸಲಹಾ ಸಮಿತಿಯಾಗಲಿ ಅಥವಾ ಬಿಸಿಸಿಐ ಮೂಲಗಳಾಗಲಿ ಯಾರೂ ಕೂಡ ಕೋಚ್ ರೇಸ್ ನಲ್ಲಿರುವ  ಪ್ರಮುಖರ ಕುರಿತು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವಂತೆ ಟೀಂ ಇಂಡಿಯಾ ಮಾಜಿ ನಿರ್ದೇಶಕ ರವಿಶಾಸ್ತ್ರಿ, ಆಯ್ಕೆ ಸಮಿತಿ ಅಧ್ಯಕ್ಷ  ಸಂದೀಪ್ ಪಾಟೀಲ್ ಮತ್ತು ಅಂಡರ್ 19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ನಡುವೆ ತೀವ್ರ ಪೈಪೋಟಿ ಎದುರಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ