ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಜಿಂಬಾಬ್ವೆ ಅತ್ಯಾಚಾರ ಪ್ರಕರಣ: ಬಂಧಿತ ಭಾರತೀಯ ಆರೋಪಿ ಬಿಡುಗಡೆ

ಭಾರತೀಯ ಕ್ರಿಕೆಟ್ ತಂಡಕ್ಕೆ ಕಳಂಕ ಹಚ್ಚಿದ್ದ ಹರಾರೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಕ್ಕೊಳಗಾಗಿದ್ದ ಭಾರತೀಯ ವ್ಯಕ್ತಿಯನ್ನು...

ಸಾಂದರ್ಭಿಕ ಚಿತ್ರ
Lingaraj Badiger
Updated On : 22 Jun 2016, 8:05 am
ನವದೆಹಲಿ: ಭಾರತೀಯ ಕ್ರಿಕೆಟ್ ತಂಡಕ್ಕೆ ಕಳಂಕ ಹಚ್ಚಿದ್ದ ಹರಾರೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಕ್ಕೊಳಗಾಗಿದ್ದ ಭಾರತೀಯ ವ್ಯಕ್ತಿಯನ್ನು ಜಿಂಬಾಬ್ವೆ ಹೈಕೋರ್ಟ್ ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ ಎಂದು ಬುಧವಾರ ಆ ವ್ಯಕ್ತಿಯ ಕಾರ್ಯನಿರ್ವಹಿಸುತ್ತಿದ್ದ ಕಂಪನಿ ಹೇಳಿದೆ.
ಭಾರತ ಮತ್ತು ಜಿಂಬಾಬ್ವೆ ದೇಶಗಳು ಮಾತ್ರವಲ್ಲದೇ ಇಡೀ ಕ್ರಿಕೆಟ್ ಜಗತ್ತಿನಲ್ಲಿ ವ್ಯಾಪಕ ಚರ್ಚೆಗೀಡಾಗಿದ್ದ ಈ ಅತ್ಯಾಚಾರ ಪ್ರಕರಣ ಸಂಬಂಧ ಕಳೆದ ಭಾನುವಾರ ಭಾರತ ಮತ್ತು ಜಿಂಬಾಬ್ವೆ ಕ್ರಿಕೆಟ್ ಸರಣಿಯ ಪ್ರಾಯೋಜನೆ ವಹಿಸಿರುವ ಕಂಪನಿಯ ನೌಕರ ಸೇರಿದಂತೆ ಇಬ್ಬರು ಭಾರತೀಯರನ್ನು ಬಂಧಿಸಲಾಗಿತ್ತು. 
ಪ್ರಕರಣದ ವಿಚಾರಣೆ ನಡೆಸಿದ ಹರಾರೆಯ ಹೈಕೋರ್ಟ್​ನ ಜಸ್ಟೀಸ್ ಮವಡಜೆ ಸಾಕ್ಷಾಧಾರಗಳ ಕೊರತೆಯಿಂದ ಬಂಧಿತ ಆರೋಪಿಯನ್ನು ದೋಷಮುಕ್ತಗೊಳಿಸಿ ತಕ್ಷಣ ಬಿಡುಗಡೆಗೊಳಿಸಿದ್ದಾರೆ ಎಂದು ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Advertisement

ಟೀಂ ಇಂಡಿಯಾ ಆಟಗಾರನನ್ನು ಅತ್ಯಾಚಾರ ಆರೋಪದ ಮೇಲೆ ಬಂಧಿಸಲಾಗಿದೆ ಎಂಬ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ವಿವಾದ ಸೃಷ್ಟಿಯಾಗಿತ್ತು. ನಂತರ ಬಿಸಿಸಿಐ ಮತ್ತು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾರತೀಯ ಕ್ರಿಕೆಟ್ ತಂಡದ ಯಾವುದೇ ಸದಸ್ಯ ಬಂಧಿತನಾಗಿಲ್ಲ ಎಂದು ಸ್ಪಷ್ಟನೆ ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments