ಕುಂಬ್ಳೆ. ಠಾಕೂರ್ ಮತ್ತು ಶಾಸ್ತ್ರಿ (ಸಂಗ್ರಹ ಚಿತ್ರ) 
ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಆಯ್ಕೆ; ಇಂದು ಸಂಜೆ ಅಧಿಕೃತ ಘೋಷಣೆ?

ಬಹು ನಿರೀಕ್ಷಿತ ಟೀಂ ಇಂಡಿಯಾದ ನೂತನ ಕೋಚ್ ಆಯ್ಕೆ ವಿಚಾರಕ್ಕೆ ಗುರುವಾರ ಸಂಜೆ ತೆರೆ ಬೀಳುವ ಸಾಧ್ಯತೆ ಇದ್ದು, ಸಲಹಾ ಸಮಿತಿ ನೀಡಿರುವ ಶಿಫಾರಸಿನ ಮೇರೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತವಾಗಿ ನೂತನ ಕೋಚ್ ಹೆಸರನ್ನು ಬಹಿರಂಗ ಪಡಿಸಲಿದೆ.

ಧರ್ಮಶಾಲಾ: ಬಹು ನಿರೀಕ್ಷಿತ ಟೀಂ ಇಂಡಿಯಾದ ನೂತನ ಕೋಚ್ ಆಯ್ಕೆ ವಿಚಾರಕ್ಕೆ ಗುರುವಾರ ಸಂಜೆ ತೆರೆ ಬೀಳುವ ಸಾಧ್ಯತೆ ಇದ್ದು, ಸಲಹಾ ಸಮಿತಿ ನೀಡಿರುವ ಶಿಫಾರಸಿನ ಮೇರೆಗೆ  ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತವಾಗಿ ನೂತನ ಕೋಚ್ ಹೆಸರನ್ನು ಬಹಿರಂಗ ಪಡಿಸಲಿದೆ.

ಪ್ರಧಾನ್ ಕೋಚ್ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆ ನಿನ್ನೆ ಪೂರ್ಣಗೊಂಡಿದ್ದು, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಹಾಗೂ  ವಿವಿಎಸ್ ಲಕ್ಷ್ಮಣ್ ತ್ರಿಮೂರ್ತಿಗಳನ್ನೊಳಗೊಂಡ ಸಲಹಾ ಸಮಿತಿ ಕೋಚ್ ಹುದ್ದೆ ಆಕಾಂಕ್ಷಿಗಳ ಸಂದರ್ಶನ ನಡೆಸಿ ಅದರ ವರದಿ ಮತ್ತು ತಮ್ಮ ಶಿಫಾರಸ್ಸನ್ನು ಬಿಸಿಸಿಐಗೆ ನೀಡಿದ್ದಾರೆ. ಈ ಬಗ್ಗೆ  ವರದಿ ತಮ್ಮ ಕೈ ಸೇರಿದ್ದು, ಗುರುವಾರ ಸಂಜೆ ನೂತನ ಕೋಚ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸುವುದಾಗಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಇಂದು ಧರ್ಮಶಾಲಾದಲ್ಲಿ ನಡೆಯಲಿರುವ ಬಿಸಿಸಿಐನ ಮೊದಲ ವಾರ್ಷಿಕ ಸಭೆಯಲ್ಲಿ ಚರ್ಚಿಸಿ ನೂತನ ಕೋಚ್ ಹೆಸರನ್ನು ಬಹಿರಂಗ ಪಡಿಸಲಾಗುತ್ತದೆ ಎಂದು ಠಾಕೂರ್ ತಿಳಿಸಿದ್ದಾರೆ. ಇನ್ನು  ಟೀಂ ಇಂಡಿಯಾದ ನೂತನ ಕೋಚ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಕೋಚ್ ರೇಸ್‍ ಗೆ ತಡವಾಗಿ ಎ೦ಟ್ರಿ ಕೊಟ್ಟರೂ ಕನ್ನಡಿಗ ಅನಿಲ್ ಕು೦ಬ್ಳೆ ಅವರ  ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಅಂತೆಯೇ ತ೦ಡದ ಮಾಜಿ ಡೈರೆಕ್ಟರ್ ರವಿಶಾಸ್ತ್ರಿ ಕೂಡ ಕುಂಬ್ಳೆ ಪ್ರಬಲ ಪೈಪೋಟಿ ನೀಡುತ್ತಿದ್ದು, ಇವರಿಬ್ಬರಲ್ಲಿ ಒಬ್ಬರು ಹುದ್ದೆ ಅಲಂಕರಿಸಲಿದ್ದಾರೆ.

ಮೂಲಗಳ ಪ್ರಕಾರ ರವಿಶಾಸ್ತ್ರಿ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಹರಾಗಿದ್ದರೂ, ಈ ಹಿಂದಿ ತಂಡದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಕಾರಣ ಅವರ ಅವಧಿಯಲ್ಲಿನ ತಂಡದ ಪ್ರದರ್ಶನ  ಸಲಹಾ ಸಮಿತಿ ಸದಸ್ಯರ ಗಮನ ಸೆಳೆಯುವಲ್ಲಿ ವಿಫಲವಾಗಿದೆ ಎಂದು ಹೇಳಲಾಗುತ್ತಿದೆ. ನಿದೇ೯ಶಕನಾಗಿದ್ದ ಅವಯಲ್ಲಿ ಟೆಸ್ಟ್ ನಿವ೯ಹಣೆ ಉತ್ತಮವೆನಿಸಿದ್ದರೂ, ಏಕದಿನ ಮತ್ತು ಟಿ20  ನಿವ೯ಹಣೆ ತೃಪ್ತಿದಾಯಕವೆನಿಸಿಲ್ಲ. ಅಲ್ಲದೆ ಏಕದಿನ, ಟಿ20 ವಿಶ್ವಕಪ್‍ಗಳ ಸೆಮಿಫೈನಲ್‍ನಲ್ಲೇ ಎಡವಿರುವುದು ಶಾಸ್ತ್ರಿ ಹಿನ್ನಡೆಗೆ ಕಾರಣ ಎಂದು ಹೇಳಲಾಗುತ್ತಿದೆ. ಇನ್ನು ಸಂದರ್ಶನದ ವೇಳೆ  ಸಲಹಾ ಸಮಿತಿಗೆ ಅನಿಲ್ ಕುಂಬ್ಳೆ ನೀಡಿರುವ ಪ್ರಾತ್ಯಕ್ಷಿಕೆ ಮತ್ತು ವಿದೇಶದಲ್ಲಿ ತಂಡದ ಉತ್ತಮ ಪ್ರದರ್ಶನಕ್ಕೆ ಕೈಗೊಳ್ಳಬಹುದಾದ ಕ್ರಮಗಳು ತೃಪ್ತಿ ನೀಡಿದ್ದು ಬಹುತೇಕ ಅನಿಲ್ ಕುಂಬ್ಳೆ ಅವರೇ  ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆಯಾದರೂ ಯಾವುದೇ ಅಚ್ಚರಿ ಇಲ್ಲ ಎಂದು ಕ್ರಿಕೆಟ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT