ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾ ನೂತನ ಕೋಚ್
ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಟೀಂ ಇಂಡಿಯಾ ಕೋಚ್ ಹುದ್ದೆಗೆ ಕೊನೆಗೂ ಸಾರಥಿ ಸಿಕ್ಕಂತಾಗಿದೆ. ಹೌದು ಮಾಜಿ ಕ್ರಿಕೆಟಿಗ ಕನ್ನಡಿಗ ಅನಿಲ್ ಕುಂಬ್ಳೆ ಟೀಂ...
ನವದೆಹಲಿ: ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಟೀಂ ಇಂಡಿಯಾ ಕೋಚ್ ಹುದ್ದೆಗೆ ಕೊನೆಗೂ ಸಾರಥಿ ಸಿಕ್ಕಂತಾಗಿದೆ. ಹೌದು ಮಾಜಿ ಕ್ರಿಕೆಟಿಗ ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಮಾಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಘೋಷಿಸಿದೆ.
ಟೀಂ ಇಂಡಿಯಾ ಕೋಚ್ ಆಯ್ಕೆ ವಿಚಾರವಾಗಿ ಇಂದು ಹಿಮಾಚಲದ ಧರ್ಮಶಾಲಾದಲ್ಲಿ ನಡೆದ ಬಿಸಿಸಿಐ ಉನ್ನತ ಮಟ್ಟದ ಸಭೆಯಲ್ಲಿ ಅನಿಲ್ ಕುಂಬ್ಳೆಯನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಾಗಿದೆ.ಮಾಜಿ ಡೈರೆಕ್ಟರ್ ರವಿಶಾಸ್ತ್ರಿ ಹಾಗೂ ಸಂದೀಪ್ ಪಾಟೀಲ್ ಕೋಚ್ ಹುದ್ದೆ ರೇಸ್ ನಲ್ಲಿದ್ದರು. ಇವರಿಬ್ಬರನ್ನು ಹಿಂದಿಕ್ಕಿದ ಅನಿಲ್ ಕುಂಬ್ಳೆ ಕೋಚ್ ಆಗಿ ಆಯ್ಕೆಯಾಗಿದ್ದಾರೆ.
ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ತ್ರಿಮೂರ್ತಿಗಳನ್ನೊಳಗೊಂಡ ಸಲಹಾ ಸಮಿತಿ ಕೋಚ್ ಹುದ್ದೆ ಆಕಾಂಕ್ಷಿಗಳ ಸಂದರ್ಶನ ನಡೆಸಿ ಅದರ ವರದಿ ಮತ್ತು ತಮ್ಮ ಶಿಫಾರಸ್ಸನ್ನು ಬಿಸಿಸಿಐಗೆ ನೀಡಿತ್ತು.
ಸಲಹಾ ಸಮಿತಿ ಸಲಹೆ ಹಿನ್ನೆಲೆ ಅನಿಲ್ ಕುಂಬ್ಳೆ ಅವರನ್ನು ಒಂದು ವರ್ಷದ ಅವಧಿಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.