ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತರತ್ನವನ್ನು ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಗೆ ನೀಡಬೇಕೆನ್ನುವ ಕೂಗು ಕೇಳಿಬರುತ್ತಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಹ್ಲಿ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲ ಮಾದರಿ ಕ್ರಿಕೆಟ್ನಲ್ಲೂ ಉತ್ತಮ ಪ್ರದರ್ಶನ ನೀಡಿ ಮನೆಮಾತಾಗಿರುವುದು ಅವರ ಸಾಧನೆಗೆ ಹಿಡಿದ ಕನ್ನಡಿಯಾಗಿದೆ. ಕಳೆದ ವರ್ಷ ನಡೆದ ಆಸ್ಟ್ರೇಲಿಯ ಸರಣಿಯಿಂದ ಅದ್ಭುತ ಫಾರ್ಮ್ನಲ್ಲಿರುವ ಕೊಹ್ಲಿ ಇತ್ತೀಚಿನ ಐಪಿಎಲ್ವರೆಗೂ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಇದನ್ನು ಪರಿಗಣಿಸಿ ದೆಹಲಿ ಬ್ಯಾಟ್ಸ್ಮನ್ಗೆ ‘ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್’ (ಅಖಿಲ ಭಾರತ ಕ್ರೀಡಾ ಪ್ರಾಧಿಕಾರ) ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ಗೆ ಶಿಫಾರಸು ಪತ್ರ ಬರೆದಿದೆ.
ವಿರಾಟ್ ಕೊಹ್ಲಿ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಹೆಸರನ್ನು ಬೆಳಗುವ ಎಲ್ಲ ಲಕ್ಷಣಗಳಿರುವುದರಿಂದ ಅವರಿಗೆ ಪ್ರಶಸ್ತಿ ನೀಡಲು ಮುಂದಾಗಬೇಕು ಎಂದು ಪತ್ರದಲ್ಲಿ ತಿಳಿಸಿದೆ. ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ಗೆ ಈಗಾಗಲೇ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.