ಗೌತಮ್ ಗಂಭೀರ್ 
ಕ್ರಿಕೆಟ್

ಟೀಂ ಇಂಡಿಯಾ ಗೆ ಕುಂಬ್ಳೆ ಗಿಂತ ಉತ್ತಮವಾದ ಕೋಚ್ ಸಿಗಲ್ಲ: ಗೌತಮ್ ಗಂಭೀರ್

ಟೀ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ಅವರಿಗಿಂತ ಉತ್ತಮ ಅಭ್ಯರ್ಥಿ ಸಿಗುವುದಿಲ್ಲ ಎಂದು ಮಾಜಿ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ..

ನವದೆಹಲಿ: ಟೀ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ಅವರಿಗಿಂತ ಉತ್ತಮ ಅಭ್ಯರ್ಥಿ ಸಿಗುವುದಿಲ್ಲ ಎಂದು ಮಾಜಿ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

ಆಂಗ್ಲ ಚಾನೆಲ್ ವೊಂದರ ಸಂದರ್ಶನದಲ್ಲಿ ಮಾತನಾಡಿದ ಗೌತಮ್ ಗಂಭೀರ್, ಅನಿಲ್ ಕುಂಬ್ಳೆ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗಿಂತ ಹೆಚ್ಚು ವೃತ್ತಿಪರರು ಎಂದು ಹೇಳುವ ಮೂಲಕ ರವಿಶಾಸ್ತ್ರಿಗೆ ಟಾಂಗ್ ನೀಡಿದ್ದಾರೆ.

ಮುಖ್ಯಕೋಚ್ ಹುದ್ದೆಯಿಂದ ವಂಚಿತರಾಗಿರುವ  ರವಿಶಾಸ್ತ್ರಿ ನಿರಾಶರಾಗಿದ್ದಾರೆ. 10 ತಿಂಗಳುಗಳ ಕಾಲ ಟೀಂ ಇಂಡಿಯಾದ ನಿರ್ದೇಶಕರಾಗಿದ್ದ ರವಿ ಶಾಸ್ತ್ರಿ ಅವರ ಟ್ರ್ಯಾರ್ ರೆಕಾರ್ಡ್ ಏನು ಎಂದು ಗಂಭೀರ್ ಪ್ರಶ್ನಿಸಿದ್ದಾರೆ.

ಯಾವುದೇ ಸಂದರ್ಶನದಲ್ಲಿ ಪ್ರತಿಕ್ರಿಯಿಸುವಾಗ, ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುವಾಗ ಶಾಸ್ತ್ರಿ ಹತಾಶರಾಗಿ ಮಾತನಾಡುತ್ತಿದ್ದಾರೆ. ರವಿಶಾಸ್ತ್ರಿ ಸತ್ಯವನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿಲ್ಲ, ಎಂದು ಗಂಭೀರ್ ತಿಳಿಸಿದ್ದಾರೆ.

ಅನಿಲ್ ಕುಂಬ್ಳೆ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದಾಗಲೇ ಇರುವ ಎಲ್ಲಾ ಅಭ್ಯರ್ಥಿಗಳಿಗಿಂತ ಕುಂಬ್ಳೆ ಹೆಚ್ಚು ವೃತ್ತಿ ಪರರು ಎಂದು ಬಿಸಿಸಿಐ ಗೆ ತಿಳಿದಿತ್ತು, ಹೀಗಾಗಿ ಅವರನ್ನೇ ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT