ಟೀಂ ಇಂಡಿಯಾ 
ಕ್ರಿಕೆಟ್

ಏಷ್ಯಾಕಪ್: ಅತೀ ಹೆಚ್ಚು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಂ ಇಂಡಿಯಾ

ಬಾಂಗ್ಲಾದೇಶದಲ್ಲಿ ನಡೆದ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಅತಿಥೇಯ ಬಾಂಗ್ಲಾವನ್ನು ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಅತೀ ಹೆಚ್ಚು...

ಬಾಂಗ್ಲಾದೇಶದಲ್ಲಿ ನಡೆದ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಅತಿಥೇಯ ಬಾಂಗ್ಲಾವನ್ನು ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಅತೀ ಹೆಚ್ಚು ಬಾರಿ ಏಷ್ಯಾ ಕಪ್ ಗೆದ್ದ ಖ್ಯಾತಿಗೆ ಟೀಂ ಇಂಡಿಯಾ ಭಾಗಿಯಾಗಿದೆ. 
1984ರಲ್ಲಿ ಆರಂಭವಾದ ಏಷ್ಯಾಕಪ್ ಪಂದ್ಯಾವಳಿ ಇಂದಿಗೂ ನಡೆದುಕೊಂಡು ಬಂದಿದೆ. ಮೊದಲ ಏಷ್ಯಾಕಪ್ ಶರ್ಜಾದಲ್ಲಿ ನಡೆದು ಭಾರತ, ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳು ಭಾಗಿಯಾಗಿದ್ದವು. ಎಲ್ಲಾ ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾವನ್ನು ಚಾಂಪಿಯನ್ ಎಂದು ಘೋಷಿಸಲಾಯಿತು. 
1988ರಲ್ಲಿ ಬಾಂಗ್ಲಾದೇಶದಲ್ಲಿ ಏಷ್ಯಾಕಪ್ ಪಂದ್ಯಾವಳಿ ನಡೆಯಿತು. ಫೈನಲ್ ನಲ್ಲಿ ಶ್ರೀಲಂಕಾವನ್ನು ಮಣಿಸಿದ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತು. 
1990ರಲ್ಲಿ ಭಾರತದಲ್ಲಿ ಏಷ್ಯಾಕಪ್ ಪಂದ್ಯಾವಳಿ ನಡೆಸಲಾಯಿತು. ಇದರಲ್ಲಿ ಮೂರು ತಂಡಗಳು ಭಾಗಿಯಾಗಿದ್ದವು. ಪಾಕಿಸ್ತಾನ ಟೂರ್ನಿಯಿಂದ ಹಿಂದುಳಿದಿತ್ತು. ಫೈನಲ್ ನಲ್ಲಿ ಶ್ರೀಲಂಕಾವನ್ನು ಮಣಿಸಿ ಟೀಂ ಇಂಡಿಯಾ ಚಾಂಪಿಯನ್ ಆಯಿತು. 
1995ರಲ್ಲಿ ಶಾರ್ಜಾದಲ್ಲಿ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಮತ್ತೆ ಶ್ರೀಲಂಕಾ ಹಾಗೂ ಟೀಂ ಇಂಡಿಯಾ ಫೈನಲ್ ನಲ್ಲಿ ಮುಖಾಮುಖಿಯಾಗಿ ಶ್ರೀಲಂಕಾವನ್ನು ಸೋಲಿಸಿ ಭಾರತ ಚಾಂಪಿಯನ್ ಆದರು. 
2010ರಲ್ಲಿ ಏಷ್ಯಾಕಪ್ ಟೂರ್ನಿಯನ್ನು ಶ್ರೀಲಂಕಾ ಆಯೋಚಿಸಿತ್ತು. ಫೈನಲ್ ಪಂದ್ಯದಲ್ಲಿ ಲಂಕಾ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತು. 
ಬಾಂಗ್ಲಾದೇಶದಲ್ಲಿ 2016ರ ಏಷ್ಯಾಕಪ್ ಟೂರ್ನಿ ನಡೆಯಿತು. ಟೂರ್ನಿಯಲ್ಲಿ ಭಾರತ, ಶ್ರೀಲಂಕಾ, ಪಾಕಿಸ್ತಾನ, ಆಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು ಭಾಗಿಯಾಗಿದ್ದವು. ಫೈನಲ್ ಗೆ ಬಂದ ಬಾಂಗ್ಲಾದೇಶ ಹಾಗೂ ಟೀಂ ಇಂಡಿಯಾ ನಡುವೆ ನಡೆದ ರೋಚಕ ಪಂದ್ಯದಲ್ಲಿ ಬಾಂಗ್ಲಾವನ್ನು ಮಣಿಸಿ ಟೀಂ ಇಂಡಿಯಾ ಆರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!