ಧರ್ಮಶಾಲಾದಲ್ಲಿ ನಡೆಯಬೇಕಿರುವ ಇಂಡೋ-ಪಾಕ್ ಪಂದ್ಯ ಸ್ಥಳಾಂತರವಿಲ್ಲ: ಬಿಸಿಸಿಐ
ಮಾರ್ಚ್ 19ರಂದು ಹಿಮಾಚಲಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯಬೇಕಿರುವ ಇಂಡೋ-ಪಾಕ್ ಪಂದ್ಯ ಸ್ಥಳಾಂತರವಿಲ್ಲ ಎಂದು ಭಾರತೀಯ ಕ್ರಿಕೆಟ್...
ನವದೆಹಲಿ: ಮಾರ್ಚ್ 19ರಂದು ಹಿಮಾಚಲಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯಬೇಕಿರುವ ಇಂಡೋ-ಪಾಕ್ ಪಂದ್ಯ ಸ್ಥಳಾಂತರವಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸ್ಪಷ್ಟಪಡಿಸಿದೆ.
ಇಂಡೋ-ಪಾಕ್ ಪಂದ್ಯಕ್ಕೆ ಹಿಮಾಚಲ ಪ್ರದೇಶದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಪೂರ್ವ ನಿಗದಿಯಂತೆ ಇಂಡೋ-ಪಾಕ್ ಪಂದ್ಯ ಧರ್ಮಶಾಲಾ ಕ್ರೀಡಾಂಗಣದಲ್ಲೇ ನಡೆಯಲಿದೆ ಅದರಲ್ಲಿ ಯಾವುದೇ ಸಂಶಯ ಬೇಡ ಎಂದು ಬಿಸಿಸಿಐ ಹೇಳಿದೆ.
ಟಿ20 ವಿಶ್ವಕಪ್ ಟೂರ್ನಿಯ ಇಂಡೋ-ಪಾಕ್ ಪಂದ್ಯ ಧರ್ಮಶಾಲೆಯಲ್ಲಿ ಆಯೋಜಿಸಲಾಗಿತ್ತು. ಆದರೆ ಪಠಾನ್ ಕೋಟ್ ವಾಯುನೆಲೆ ಮೇಲೆ ಭಯೋತ್ಪಾದಕ ದಾಳಿಯಲ್ಲಿ ಹಿಮಾಚಲ ಪ್ರದೇಶದ ಯೋಧರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಧರ್ಮಶಾಲೆಯಲ್ಲಿ ಆಡಬಾರದು ಎಂದು ಕೆಲ ಸಂಘಟನೆಗಳು ಆಗ್ರಹಿಸಿದ್ದವು.
ಧರ್ಮಶಾಲಾದಲ್ಲಿ ನಡೆಯಲಿರುವ ಪಂದ್ಯಕ್ಕೆ ಅಭದ್ರತೆ ಕಾರಣ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಆತಂಕ ವ್ಯಕ್ತಪಡಿಸಿದ್ದು, ಪಂದ್ಯ ಧರ್ಮಶಾಲಾದಲ್ಲೇ ನಡೆಯಲಿದೆ. ಇದಕ್ಕೆ ಹಿಮಾಚಲ ಪ್ರದೇಶ ಸರ್ಕಾರ ಸೂಕ್ತ ಭದ್ರತೆ ಒದಗಿಸಲಿದೆ ಎಂದು ಬಿಸಿಸಿಐ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.