ಮೋಹಿತ್ ಶರ್ಮಾ ಮತ್ತು ಶ್ವೇತಾ 
ಕ್ರಿಕೆಟ್

ಗೆಳತಿ ಜೊತೆ ಸಪ್ತಪದಿ ತುಳಿದ ಕ್ರಿಕೆಟಿಗ ಮೋಹಿತ್ ಶರ್ಮಾ

ಹರಿಯಾಣ ಮೂಲದ ವೇಗದ ಬೌಲರ್ ಮೋಹಿತ್ ಶರ್ಮ ತಮ್ಮ ದೀರ್ಘಕಾಲದ ಗೆಳತಿ ಶ್ವೇತಾ ಜತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ...

ನವದೆಹಲಿ:  ಹರಿಯಾಣ ಮೂಲದ ವೇಗದ ಬೌಲರ್ ಮೋಹಿತ್ ಶರ್ಮ ತಮ್ಮ ದೀರ್ಘಕಾಲದ ಗೆಳತಿ ಶ್ವೇತಾ ಜತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ದೆಹಲಿಯ ಲೀಲಾ ಪ್ಯಾಲೇಸ್‌ನಲ್ಲಿ ವಿವಾಹ ಸಮಾರಂಭವನ್ನು ಆಯೋಜಿಸಲಾಗಿತ್ತು. 27 ವರ್ಷದ ಯುವ ಕ್ರಿಕೆಟಿಗ ಕಳೆದ ಜನವರಿ ತಿಂಗಳಲ್ಲಿ ಶ್ವೇತಾ ಅವರ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಶ್ವೇತಾ  ಕೋಲ್ಕತ್ತಾದಲ್ಲಿ ಹೊಟೆಲ್ ಮ್ಯಾನೇಜ್‌ಮೆಂಟ್‌ನ್ನು ಅಧ್ಯಯನ ನಡೆಸುತ್ತಿದ್ದಾರೆ.  

ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ದೆಹಲಿ ಆಟಗಾರ ಉನ್ಮುಕ್ತ್ ಚಂದ್, ಪರ್ವಿಂದರ್ ಅವಾನ, ಜೋಗಿಂದರ್ ಶರ್ಮ  ಸಮಾರಂಭದಲ್ಲಿ ಪಾಲ್ಗೊಂಡು ನವದಂಪತಿಗೆ ಶುಭ ಹಾರೈಸಿದ್ದಾರೆ.

ಸದ್ಯ ಗಾಯದಿಂದಾಗಿ ರಾಷ್ಟ್ರೀಯ ಕ್ರಿಕೆಟ್ ತಂಡದಿಂದ ಹೊರಗಿರುವ ಮೋಹಿತ್ ಶರ್ಮ ಭಾರತ ಪರ 26 ಏಕದಿನ ಮತ್ತು 8 ಟಿ20 ಪಂದ್ಯ ಆಡಿದ್ದಾರೆ. 2014ರ ಟಿ20 ವಿಶ್ವಕಪ್ ಮತ್ತು 2015ರ ಏಕದಿನ ವಿಶ್ವಕಪ್‌ನಲ್ಲಿ ಅವರು ಭಾರತ ತಂಡವನ್ನು ಪ್ರತಿನಿಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?